ದ.ಕ.ಜಿಲ್ಲೆಯ 9 ಗ್ರಾಮಗಳಿಗೆ ಗಾಂಧಿ ಗ್ರಾಮ ಪುರಸ್ಕಾರ
Update: 2023-09-27 16:15 GMT
ಮಂಗಳೂರು: ದ.ಕ.ಜಿಲ್ಲೆಯ 9 ತಾಲೂಕಿನ 9 ಗ್ರಾಮಗಳು 2022-23ನೆ ಸಾಲಿನ ಗಾಂಧಿ ಗ್ರಾಮ ಪುರಸ್ಕಾರಕ್ಕೆ ಆಯ್ಕೆ ಯಾಗಿದೆ. ಅಕ್ಟೋಬರ್ 2ರ ಗಾಂಧಿಜಯಂತಿ ದಿನದಂದು ರಾಜ್ಯ ವಿಧಾನಸೌಧದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಪ್ರಶಸ್ತಿ ಯನ್ನು ಪ್ರದಾನ ಮಾಡಲಾಗುತ್ತದೆ ಎಂದು ಪ್ರಕಟನೆ ತಿಳಿಸಿದೆ.
ಮಂಗಳೂರು ತಾಲೂಕಿನ ಉಳಾಯಿಬೆಟ್ಟು, ಉಳ್ಳಾಲ ತಾಲೂಕಿನ ಬೆಳ್ಮ, ಮುಲ್ಕಿ ತಾಲೂಕಿನ ಕೆಮ್ರಾಲ್, ಮೂಡುಬಿದಿರೆ ತಾಲೂಕಿನ ಪುತ್ತಿಗೆ, ಬಂಟ್ವಾಳ ತಾಲೂಕಿನ ಅಮ್ಮುಂಜೆ, ಪುತ್ತೂರು ತಾಲೂಕಿನ ಉಪ್ಪಿನಂಗಡಿ, ಕಡಬ ತಾಲೂಕಿನ ಸವಣೂರು, ಬೆಳ್ತಂಗಡಿ ತಾಲೂಕಿನ ಬಳಂಜ, ಸುಳ್ಯ ತಾಲೂಕಿನ ಮರ್ಕಂಜ ಗ್ರಾಮಗಳು ಗಾಂಧಿ ಗ್ರಾಮ ಪುರಸ್ಕಾರಕ್ಕೆ ಆಯ್ಕೆಯಾಗಿವೆ.