ಸರಕಾರದಿಂದ ಮಹಿಳೆಯರಿಗೆ ಶಕ್ತಿ ತುಂಬುವ ಕೆಲಸವಾಗುತ್ತಿದೆ: ಶಾಸಕ ಅಶೋಕ್ ಕುಮಾರ್ ರೈ

Update: 2023-09-10 12:36 GMT

ವಿಟ್ಲ: ಜನರಲ್ಲಿ ಸೇವಾ ಮನೋಭಾವವನ್ನು ಹೊಂದಿ ಪ್ರೀತಿಯಿಂದ ನೋಡುವುದು ಕ್ರೈಸ್ತ ಸಮುದಾಯದ್ದಾಗಿದೆ. ದಕ್ಷಿಣ ಕನ್ನಡ ಜಿಲ್ಲೆಗೆ ಗೃಹ ಲಕ್ಷ್ಮಿ ಯೋಜನೆಗಾಗಿ 60ಕೋಟಿ ನೀಡಲಾಗಿದೆ. ಮಹಿಳೆಯರಿಗೆ ಶಕ್ತಿ ತುಂಬುವ ಮೂಲಕ ಕುಟುಂಬವನ್ನು ಸದೃಢವಾಗಿಸಲಾಗುತ್ತಿದೆ ಎಂದು ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಹೇಳಿದರು.

ಅವರು ಪೆರುವಾಯಿ ಮುಚ್ಚಿರಪದವು ಫಾತಿಮಾ ಮಾತೆಯ ದೇವಾಲಯದಲ್ಲಿ ಸಮುದಾಯ ಭವನದ ಶಿಲಾನ್ಯಾಸವನ್ನು ನಡೆಸಿ ಮಾತನಾಡಿದರು.

ಕ್ರೈಸ್ತ ಅಕಾಡೆಮಿಯ ಸ್ಥಾಪನೆಗೆ ಸರ್ಕಾರ ಮುಂದಾಗಿದೆ. ಚರ್ಚ್ ಬಳಿಯ ಇಂಟರ್ ಲಾಕ್ ಅಳವಡಿಕೆಗೆ ಹಾಗೂ ಸಮುದಾಯ ಭವನಕ್ಕೆ ಹೆಚ್ಚುವರಿ ಅನುದಾನ ಒದಗಿಸುವ ಕಾರ್ಯ ಮಾಡಲಾಗುವುದು. ಅಭಿವೃದ್ಧಿ ಕಾರ್ಯಕ್ಕೆ ಸಾಧ್ಯವಾದಷ್ಟು ಅನುದಾನ ನೀಡುವ ಕಾರ್ಯ ಮಾಡಲಾಗುವುದು. ಕೃಷಿಯ ಜತೆಗೆ ಉದ್ಯಮ ಕ್ಷೇತ್ರಕ್ಕೆ ಆದ್ಯತೆಯನ್ನು ನೀಡಲಾಗುತ್ತಿದೆ ಎಂದು ತಿಳಿಸಿದರು.

ಪೆರುವಾಯಿ ಫಾತಿಮಾ ಮಾತೆಯ ದೇವಾಲಯದ ಧರ್ಮಗುರುಗಳಾದ ಸೈಮನ್ ಡಿಸೋಜ ಅಧ್ಯಕ್ಷತೆ ವಹಿಸಿ ಮಾತನಾಡಿ ಪೆರುವಾಯಿ ಫಾತಿಮಾ ಮಾತೆಯ ದೇವಾಲಯವು ಎಲ್ಲರ ಸಹಕಾರದಲ್ಲಿ ಅಭಿವೃದ್ಧಿ ಹೊಂದುತ್ತಿದೆ. ಅಶೋಕ್ ರೈ ಅವರ ಬಡವರ ಸೇವೆ ಶ್ಲಾಘನೀಯವಾಗಿದೆ ಎಂದರು.

ಮಂಗಳೂರು ಪದುವಾ ಕಾಲೇಜು ಪ್ರಾಂಶುಪಾಲ ಅರುಣ್ ವಿಲ್ಸನ್ ಲೋಬೊ ಆಶೀರ್ವಚನ ನೀಡಿದರು. ಚರ್ಚ್ ನ ಅಗತ್ಯಗಳಿಗೆ ಸರ್ಕಾರದಿಂದ ಅನುದಾನ ನೀಡುವಂತೆ ಮನವಿಸಲ್ಲಿಸಲಾಯಿತು.

ಮಂಗಳೂರು ದಕ್ಷಿಣ ಮಾಜಿ ಶಾಸಕ ಜೆ. ಆರ್. ಲೋಬೊ, ಪೆರುವಾಯಿ ಗ್ರಾಮ ಪಂಚಾಯತಿ ಅಧ್ಯಕ್ಷೆ ನೆಫೀಸ, ಮಾಣಿಲ ಗ್ರಾಮ ಪಂಚಾಯಿತಿ ಅಧ್ಯಕ್ಷ ಶ್ರೀಧರ್ ಬಾಳೆಕಲ್ಲು, ಅಳಿಕೆ ಗ್ರಾಮ ಪಂಚಾಯಿತಿ ಪದ್ಮನಾಭ ಪೂಜಾಲ ಸಣ್ಣಗುತ್ತು, ಮಂಗಳೂರು ದಕ್ಷಿಣ ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ ನೆಲ್ಸನ್ ಮತ್ತಿತರರು ಉಪಸ್ಥಿತರಿದ್ದರು.

ಪಾಲನಾ ಪರಿಷತ್ತ್ ಉಪಾಧ್ಯಕ್ಷ ಡೇಸ್ ನೊಂತೇರೋ ಸ್ವಾಗತಿಸಿದರು. ಕಾರ್ಯದರ್ಶಿ ವೈಲೆಟ್ ಕುವೆಲ್ಲೊ ವಂದಿಸಿದರು. ಧೀಕ್ಷಿತಾ ಡಿಸೋಜಾ ಕಾರ್ಯಕ್ರಮ ನಿರೂಪಿಸಿದರು.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News