ನಿಟ್ಟೆ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಪದವಿ ಪ್ರದಾನ ಸಮಾರಂಭ

Update: 2023-10-25 14:43 GMT

ಮಂಗಳೂರು: ವಿದ್ಯಾರ್ಥಿಗಳು ತಮ್ಮ ವಿದ್ಯಾರ್ಥಿ ಜೀವನ, ವೃತ್ತಿ ಜೀವನ ಹಾಗೂ ವೈಯಕ್ತಿಕ ಜೀವನದಲ್ಲಿ ಎದುರಾಗುವ ಎಡರುತೊಡರುಗಳು, ಅನಿಶ್ಚಿತತೆಯನ್ನು ಸಮರ್ಥವಾಗಿ ತಮ್ಮ ಪ್ರತಿಭೆ ಹಾಗೂ ಸೃಜನಶೀಲತೆಯ ಮೂಲಕ ಎದುರಿಸ ಬೇಕು ಎಂದು ನಿಟ್ಟೆ ಎಜುಕೇಶನ್ ಟ್ರಸ್ಟ್ ನ ಅಧ್ಯಕ್ಷ ಹಾಗೂ ನಿಟ್ಟೆ ಡೀಮ್ಡ್ ಟು ಬಿ ವಿಶ್ವವಿದ್ಯಾಲಯದ ಚಾನ್ಸೆಲರ್ ಎನ್ ವಿನಯ ಹೆಗ್ಡೆ ಅಭಿಪ್ರಾಯಟ್ಟಿದ್ದಾರೆ.

ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯದಲ್ಲಿ ರವಿವಾರ ನಡೆದ ಶೈಕ್ಷಣಿಕ ಸಾಲಿನ ಪದವಿ ಪ್ರದಾನ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

’ಯುವಜನತೆ ತಮ್ಮ ಗುರಿಯ ಬಗೆಗೆ ದೃಷ್ಟಿಯನ್ನು ಕೇಂದ್ರೀಕರಿಸಿ ಸಾಧನೆಯ ಮಟ್ಟಿಲನ್ನೇರಬೇಕು. ಶ್ರಮ ಹಾಗೂ ನಿಷ್ಟೆಯ ಬದುಕು ನಡೆಸಿ ತಮ್ಮ ಹೆತ್ತವರ, ತಮಗೆ ಬೋಧಿಸಿದ ಸಂಸ್ಥೆಗೆ ಉತ್ತಮ ಹೆಸರು ತರಬೇಕು. ತಮ್ಮ ವೈಯಕ್ತಿಕ ಏಳಿಗೆಯಿಂದ ಹಲವರ ಏಳಿಗೆಗೆ ಸಹಾಯವಾಗುವಂತೆ ಮಾಡಬೇಕು. ಕಲೆ, ಸಾಹಿತ್ಯ ಮುಂತಾದ ಕ್ಷೇತ್ರಗಳಲ್ಲಿ ವಿದ್ಯಾರ್ಥಿ ಗಳು ತಮ್ಮನ್ನು ತಾವು ತೊಡಗಿಸಿಕೊಂಡರೆ ಸರ್ವತೋಮುಖ ಅಭಿವೃದ್ಧಿ ಸಾಧ್ಯ. ನಾವು ನಮ್ಮ ಜೀವನ ದುದ್ದಕ್ಕೂ ನಿರಂತರ ಕಲಿಕೆಯೊಂದಿಗೆ ಮುನ್ನೆಡದರಷ್ಟೇ ಪ್ರಗತಿಯನ್ನು ಕಾಣಲು ಸಾಧ್ಯ’ ಎಂದು ಅವರು ಹೇಳಿದರು.

ಎಂ.ಟೆಕ್ ಮತ್ತು ಎಂಸಿಎ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಲಾಯಿತು. ಶೈಕ್ಷಣಿಕ ಸಾಧನೆಗೈದ 26 ವಿದ್ಯಾರ್ಥಿ ಗಳನ್ನು ಚಿನ್ನ ಮತ್ತು ಬೆಳ್ಳಿಯ ಪದಕ ನೀಡುವ ಮೂಲಕ ಅಭಿನಂದಿಸಲಾಯಿತು.

ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ನಿಟ್ಟೆ ಡೀಮ್ಡ್ ಟು ಬಿ ವಿಶ್ವವಿದ್ಯಾಲಯದ ಟೆಕ್ನಿಕಲ್ ಎಜುಕೇಶನ್ ವಿಭಾಗದ ವೈಸ್-ಪ್ರೆಸಿಡೆಂಟ್ ಡಾ.ಗೋಪಾಲ್ ಮುಗೆರಾಯ ಅವರು ‘ಕರಾವಳಿ ಜನರಿಗೆ ಗುಣಮಟ್ಟದ ಶಿಕ್ಷಣ ನೀಡುವಲ್ಲಿ ನಿಟ್ಟೆ ವಿದ್ಯಾ ಸಂಸ್ಥೆಯ ಪಾತ್ರ ಮಹತ್ವದ್ದು. ಯಶಸ್ಸಿನ ಹಿಂದೆ ಜ್ಞಾನ, ಪ್ರಾಮಾಣಿಕ ಪ್ರಯತ್ನ ಹಾಗೂ ಆದರ್ಶಪ್ರಾಯರಾದ ವ್ಯಕ್ತಿಯನ್ನು ನಾವು ಕಾಣಬಹುದು ಎಂದರು.

ಬಿ.ಇ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಸಮಾರಂಭದಲ್ಲಿ ಅತಿಥಿಯಾಗಿ ಭಾಗವಹಿಸಿದ್ದ ನಿಟ್ಟೆ ವಿವಿ ಪ್ರೊ.ಚಾನ್ಸೆಲರ್ ಡಾ.ಶಾಂತಾರಾಮ್ ಶೆಟ್ಟಿ ತಮ್ಮ ನುಡಿಗಳಲ್ಲಿ ‘ಯುವಜನತೆ ಸವಾಲುಯುತ ಕನಸುಗಳನ್ನು ಕಾಣಬೇಕು ಮತ್ತು ಅವು ಗಳನ್ನು ಸಾಕಾರಗೊಳಿಸುವ ಯೋಜನೆ ರೂಪಿಸಬೇಕಾಗಿದೆ ಎಂದು ಅಭಿಪ್ರಾಯಪಟ್ಟರು.

ವೈಸ್-ಚಾನ್ಸಲರ್ ಡಾ. ಎಂ.ಎಸ್. ಮೂಡಿತ್ತಾಯ ಅವರು ತಮ್ಮ ನುಡಿಗಳಲ್ಲಿ ‘ಈ 21ನೇ ಶತಮಾನದಲ್ಲಿ ಭಾರತದ ಹೆಸರು ಬಹಳಷ್ಟು ಎತ್ತರಕ್ಕೆ ಏರುತ್ತಿದೆ. ವಿಶ್ವದಲ್ಲಿ ಪದವಿ ಮುಗಿಸುವ ಪ್ರತೀ ೪ ಮಂದಿಯಲ್ಲಿ ಒಬ್ಬನು ಭಾರತೀಯನಾ ಗಿರುತ್ತಾನೆ. ಆದುದರಿಂದ ಮುಂದಿನ ದಿನಗಳಲ್ಲಿ ಭಾರತ ದೇಶವು ವಿಶ್ವಕ್ಕೆ ಉತ್ತಮ ಪ್ರತಿಭೆಗಳನ್ನು ಪರಿಚಯಿಸಲಿದೆ’ ಎಂದರು.

ನಿಟ್ಟೆ ವಿಶ್ವವಿದ್ಯಾಲಯದ ಕ್ಯಾಂಪಸ್ ಸೆಂಟರ್‌ನ ಉಪಕುಲಸಚಿವೆ ಡಾ. ರೇಖಾ ಭಂಡಾರ್ಕರ್, ಉಪ ಪರೀಕ್ಷಾ ನಿಯಂತ್ರಕ ಡಾ.ಸುಬ್ರಹ್ಮಣ್ಯ ಭಟ್, ವಿವಿಧ ವಿಭಾಗಗಳ ನಿರ್ದೇಶಕರುಗಳಾದ ಡಾ.ನಾಗೇಶ್ ಪ್ರಭು, ಡಾ.ಪರಮೇಶ್ವರ, ಡಾ. ಗುರು ರಾಜ್ ಕಿದಿಯೂರು ಉಪಸ್ಥಿತರಿದ್ದರು. ಉಪಪ್ರಾಂಶುಪಾಲ ಡಾ. ಶ್ರೀನಿವಾಸ್ ರಾವ್ ಬಿ.ಆರ್ ಪದವಿ ಪ್ರದಾನ ಸಮಾರಂಭದ ಮೆರವಣಿಗೆಯನ್ನು ಮುನ್ನಡೆಸಿದರು.

ನಿಟ್ಟೆ ತಾಂತ್ರಿಕ ಮಹಾವಿದ್ಯಾಲಯದ ಪ್ರಾಂಶುಪಾಲ ಡಾ.ನಿರಂಜನ್ ಎನ್ ಚಿಪ್ಳೂಣ್ಕರ್ ಸ್ವಾಗತಿಸಿದರು. ಉಪ ಪ್ರಾಂಶುಪಾಲ ಡಾ.ಐ.ಆರ್ ಮಿತ್ತಂತಾಯ ಚಿನ್ನ ಹಾಗೂ ಬೆಳ್ಳಿಯ ಪದಕಗಳಿಸಿದ ವಿದ್ಯಾರ್ಥಿಗಳ ಹೆಸರುಗಳನ್ನು , ಪಿ.ಜಿ ಕಾರ್ಡಿನೇಟರ್ ಡಾ. ರಾಜಲಕ್ಷ್ಮೀ ಸಾಮಗ ಎಂ.ಟೆಕ್ ವಿದ್ಯಾರ್ಥಿಗಳ ಹೆಸರನ್ನು , ಎಂಸಿಎ ವಿಭಾಗದ ಬಾಲಚಂದ್ರ ಅವರು ಎಂಸಿಎ ಪದವೀಧರರ ಪಟ್ಟಿಯನ್ನು ವಾಚಿಸಿದರು. ಸಹಾಯಕ ಪರೀಕ್ಷಾ ನಿಯಂತ್ರಕ ಡಾ. ವೆಂಕಟೇಶ್ ಕಾಮತ್ ವಂದಿಸಿ ದರು. ಇಲೆಕ್ಟ್ರಾನಿಕ್ಸ್ ವಿಭಾಗದ ಡಾ. ಮಮತಾ ಗಿರೀಶ್ ಹಾಗೂ ಕಂಪ್ಯೂಟರ್ ಸೈನ್ಸ್ ವಿಭಾಗದ ಡಾ. ಶ್ರೀಕಾಂತ್ ಡಿ.ಕೆ ಕಾರ್ಯಕ್ರಮ ನಿರೂಪಿಸಿದರು.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News