ಗೃಹಲಕ್ಷ್ಮೀ ಯೋಜನೆ: ದ.ಕ.ಡಿಸಿಯಿಂದ ನೋಂದಣಿ ಪ್ರಕ್ರಿಯೆ ವೀಕ್ಷಣೆ

Update: 2023-07-20 13:59 GMT

ಮಂಗಳೂರು,ಜು.20 :ಜಿಲ್ಲೆಯಲ್ಲಿ ಗೃಹಲಕ್ಷ್ಮೀ ಯೋಜನೆಗೆ ನೋಂದಣಿ ಪ್ರಕ್ರಿಯೆ ಆರಂಭಗೊಂಡಿದ್ದು, ಮಂಗಳೂರು ಮಹಾನಗರ ಪಾಲಿಕೆಯಲ್ಲಿ ಈ ಯೋಜನೆಯಡಿ ನೋಂದಣಿಗಾಗಿ 9 ಕೇಂದ್ರಗಳನ್ನು ತೆರೆಯಲಾಗಿದೆ.

ಅಲ್ಲದೇ 3 ವಲಯ ಕಚೇರಿಗಳಲ್ಲಿ 6 ಕೇಂದ್ರಗಳು ಆರಂಭವಾಗಿವೆ. ಈ ಕೇಂದ್ರಗಳಲ್ಲಿ ನೋಂದಣಿ ಪ್ರಕ್ರಿಯೆಯನ್ನು ಪರಿಶೀಲಿಸಲು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ.ಅವರು ಜು.20ರ ಗುರುವಾರ ಮಂಗಳೂರು ಮಹಾನಗರ ಪಾಲಿಕೆ ಕಚೇರಿಗೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಮಂಗಳೂರು ಮಹಾನಗರ ಪಾಲಿಕೆ ಆಯುಕ್ತ ಆನಂದ್ ಸೇರಿದಂತೆ ಸಂಬಂಧಿಸಿದ ಅಧಿಕಾರಿಗಳಿದ್ದರು.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News