ದ್ವೇಷ ಭಾಷಣ| ಡಾ. ದಯಾಕರ್ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು

Update: 2024-09-07 13:48 GMT

ಬೆಳ್ತಂಗಡಿ: ಉಜಿರೆಯಲ್ಲಿ ನಡೆದ ವಿಶ್ವ ಹಿಂದೂ ಪರಿಷತ್ ನ ಕಾರ್ಯಕ್ರಮದಲ್ಲಿ ದ್ವೇಷ ಭಾಷಣ ಮಾಡಿದ ಡಾ‌.ಎಂ‌.ಎಂ ದಯಕರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಪ್ರಗತಿಪರ ಹೋರಾಟಗಾರ ಶೇಖರ್ ಲಾಯಿಲ ಅವರು ಬೆಳ್ತಂಗಡಿ ಠಾಣೆಗೆ ದೂರು ನೀಡಿದ್ದಾರೆ.

ಉಜಿರೆಯ ಶ್ರೀ ದಂತ ಚಿಕಿತ್ಸಾಲಯದ ಮಾಲಕ ಡಾ. ಎಂ.ಎಂ ದಯಕರ ಎಂಬಾತ VHP ಕಾರ್ಯಕ್ರಮದಲ್ಲಿ ಭಾಗವಹಿಸಿ ದ್ವೇಷ ಭಾಷಣ ಮಾಡಿ ಸಮಾಜದಲ್ಲಿ ‌ನೆಮ್ಮದಿಯಿಂದ ಬದುಕುವ ಜನರನ್ನು ಭಯದ ವಾತಾವರಣಕ್ಕೆ ದೂಡಿದ ಮತ್ತು ಸಾರ್ವಜನಿಕವಾಗಿ ಇನ್ನೊಬ್ಬ ವ್ಯಕ್ತಿಯನ್ನು ಕೊಲೆ ಮಾಡಲು ಪ್ರೇರಣೆ ನೀಡಿದ ಡಾ‌. ಎಂ.ಎಂ ದಯಕರ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ಶೇಖರ್ ಲಾಯಿಲ ಅವರು ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಪೊಲೀಸರು ದೂರನ್ನು ಸ್ವೀಕರಿಸಿದ್ದು ಪರಿಶೀಲನೆ ನಡೆಸುತ್ತಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News