ಭಾರಿ ಮಳೆ: ಬೆಳ್ತಂಗಡಿ ತಾಲೂಕಿನ ಶಾಲೆಗಳಿಗೆ ರಜೆ

Update: 2024-07-04 03:20 GMT

ಸಾಂದರ್ಭಿಕ ಚಿತ್ರ

ಬೆಳ್ತಂಗಡಿ; ತಾಲೂಕಿನಲ್ಲಿ ಕಳೆದ ಎರಡು ದಿನಗಳಿಂದ ಭಾರಿ ಮಳೆಯಾಗುತ್ತಿರುವ ಕಾರಣ ಬೆಳ್ತಂಗಡಿ ತಾಲೂಕಿನ ಎಲ್ಲ ಸರಕಾರಿ, ಅನುದಾನಿತ, ಅನುದಾನ ರಹಿತ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ಜುಲೈ 4ರಂದು ರಜೆ ಘೋಷಿಸಲಾಗಿದೆ.

ಜುಲೈ 3ರಂದೂ ಭಾರಿ ಮಳೆಯಾಗಿದ್ದು, ನದಿಗಳಲ್ಲಿ ನೀರಿನ ಮಟ್ಟ ಏರಿಕೆಯಾಗಿತ್ತು. ಜುಲೈ 4ರಂದೂ ಮಳೆ ಮುಂದುವರಿದಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಬೆಳ್ತಂಗಡಿ ತಹಶೀಲ್ದಾರ್ ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿಯವರು ರಜೆ ಘೋಷಿಸಿದ್ದಾರೆ.


Tags:    

Writer - ವಾರ್ತಾಭಾರತಿ

contributor

Editor - jafar sadik

contributor

Byline - ವಾರ್ತಾಭಾರತಿ

contributor

Similar News