ಐಎಎಸ್/ಕೆಎಎಸ್ ಸ್ಪರ್ಧಾತ್ಮಕ ಪರೀಕ್ಷಾ ಪೂರ್ವ ತರಬೇತಿಯ ಪರೀಕ್ಷೆಗೆ ವೇಳಾಪಟ್ಟಿ ನಿಗದಿ

Update: 2024-10-04 14:53 IST
ಐಎಎಸ್/ಕೆಎಎಸ್ ಸ್ಪರ್ಧಾತ್ಮಕ ಪರೀಕ್ಷಾ ಪೂರ್ವ ತರಬೇತಿಯ ಪರೀಕ್ಷೆಗೆ ವೇಳಾಪಟ್ಟಿ ನಿಗದಿ

ಸಾಂದರಭಿಕ ಚಿತ್ರ (PTI)

  • whatsapp icon

ಮಂಗಳೂರು: 2024-25ನೇ ಸಾಲಿನಲ್ಲಿ ಐಎಎಸ್/ಕೆಎಎಸ್ ಸ್ಪರ್ಧಾತ್ಮಕ ಪರೀಕ್ಷಾ ಪೂರ್ವ ತರಬೇತಿಯ ಪರೀಕ್ಷೆಗೆ ಅಕ್ಟೋಬರ್ 06 ರಂದು ಬೆಳಗ್ಗೆ 10.30 ರಿಂದ ಮಧಾಹ್ನ 2.45ರ ವರೆಗೆ  ವೇಳಾಪಟ್ಟಿ ನಿಗದಿಯಾಗಿದ್ದು, ಸದರಿ ಪರೀಕ್ಷೆಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಪ್ರವೇಶ ಪತ್ರವನ್ನು ವೆಬ್‍ಸೈಟ್ https://sevasindhu.karnataka.gov.in/ minorityhallticket_app/Hall_Ticket.aspx ಮೂಲಕ ಡೌನ್ಲೋಡ್ ಮಾಡಿಕೊಳ್ಳಬಹುದಾಗಿದೆ.

ಕೆ.ಪಿ.ಎಸ್.ಸಿ ಮಾದರಿಯ ಹಾಗೆ ಒಬ್ಬ ವಿದ್ಯಾರ್ಥಿಯು ತನ್ನ ಪೂರ್ಣ ಹೆಸರು ಮತ್ತು ಸೇವಾಸಿಂಧು ಅರ್ಜಿಯ ಸಂಖ್ಯೆ ಬಳಸಿ ಡೌನ್ಲೋಡ್ ಮಾಡಿಕೊಳ್ಳಬಹುದು. ಒಮ್ಮೆ ಡೌನ್ಲೋಡ್ ಮಾಡಿಕೊಂಡು ನಂತರ ಮತ್ತೊಮ್ಮೆ ಪ್ರವೇಶ ಪತ್ರ ಡೌನ್ಲೋಡ್ ಮಾಡಿಕೊಳ್ಳಲು ಅವಕಾಶ ಇರುವುದಿಲ್ಲ.

ಹೆಚ್ಚಿನ ಮಾಹಿತಿಗಾಗಿ ಅಲ್ಪಸಂಖ್ಯಾತರ ನಿರ್ದೇಶನಾಲಯದ ಅಧಿಕೃತ ಜಾಲತಾಣhttps://dom.karnataka.gov.in ಅನ್ನು ವೀಕ್ಷಿಸಿ ಹಾಗೂ ಹತ್ತಿರದ ಜಿಲ್ಲಾ ಮತ್ತು ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳಿಗೆ ಸಂಪರ್ಕಿಸಬಹುದಾಗಿದೆ ಎಂದು ದ.ಕ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಪ್ರಕಟನೆಯಲ್ಲಿ ತಿಳಿಸಿದೆ.

Tags:    

Writer - ವಾರ್ತಾಭಾರತಿ

contributor

Editor - jafar sadik

contributor

Byline - ವಾರ್ತಾಭಾರತಿ

contributor

Similar News