ದಸರಾ ಅಲಂಕಾರಕ್ಕೆ ಅಕ್ರಮ ವಿದ್ಯುತ್ ಸಂಪರ್ಕ ಪಡೆದರೆ ಕಾನೂನು ಕ್ರಮ: ಮನಪಾ ಆಯುಕ್ತ ಎಚ್ಚರಿಕೆ
Update: 2023-10-19 13:17 GMT
ಮಂಗಳೂರು: ದಸರಾ ಹಬ್ಬದ ಪ್ರಯುಕ್ತ ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಮುಖ್ಯ ರಸ್ತೆಗಳಲ್ಲಿ ಅಲಂಕಾರಿಕ ವಿದ್ಯುತ್ ದೀಪಗಳನ್ನು ಅಳವಡಿಸಿರುವುದು ಕಂಡು ಬಂದಿದೆ. ಇದಕ್ಕೆ ಅಕ್ರಮವಾಗಿ ವಿದ್ಯುತ್ ಸಂಪರ್ಕ ಪಡೆದರೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಮನಪಾ ಆಯುಕ್ತ ಆನಂದ ಸಿ.ಎಲ್. ಎಚ್ಚರಿಕೆ ನೀಡಿದ್ದಾರೆ.
ಹಲವು ಸ್ಥಳಗಳಲ್ಲಿ ಸಾರ್ವಜನಿಕ ಹಾಗೂ ಖಾಸಗಿ ಸಂಘ ಸಂಸ್ಥೆಗಳು ಅನಧಿಕೃತ ಫ್ಲೆಕ್ಸ್ ಮತ್ತು ಬಾನರ್‌ಗಳನ್ನು ಅಳವಡಿ ಸಿದ್ದು, ಅವುಗಳಿಗೆ ಅಲಂಕಾರಿಕ ದೀಪಗಳನ್ನು ಜೋಡಿಸಲು ಪಾಲಿಕೆಯ ವಿದ್ಯುತ್ ಕಂಬಗಳಿಂದ ಅಕ್ರಮವಾಗಿ ಸಂಪರ್ಕ ಪಡೆದರೆ ಕಾನೂನು ಕ್ರಮ ಕೈಗೊಂಡು ದಂಡ ವಿಧಿಸಲಾಗುವುದು. ಅಲ್ಲದೆ ಅವಘಡಗಳು ಸಂಭವಿಸಿದರೆ ಅವರನ್ನು ನೇರ ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ಪ್ರಕಟನೆಯಲ್ಲಿ ತಿಳಿಸಿದ್ದಾರೆ.