ಫ್ಲೆಕ್ಸ್, ಬ್ಯಾನರ್‌ಗಳಿಗೆ ಅಕ್ರಮ ವಿದ್ಯುತ್ ಸಂಪರ್ಕ: ಮಹಾನಗರ ಪಾಲಿಕೆ ಎಚ್ಚರಿಕೆ

Update: 2024-09-25 14:17 GMT

ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ದಸರಾ ಹಬ್ಬದ ಪ್ರಯುಕ್ತ ನಗರದ ಮುಖ್ಯ ರಸ್ತೆಗಳಲ್ಲಿ ಅಲಂಕಾರಿಕ ವಿದ್ಯುತ್ ದೀಪಗಳನ್ನು ಅಳವಡಿಸಲಾಗಿರುತ್ತದೆ. ಹಲವಾರು ಸ್ಥಳಗಳಲ್ಲಿ ಸಾರ್ವಜನಿಕ ಹಾಗೂ ಖಾಸಗಿ ಸಂಘ ಸಂಸ್ಥೆಗಳು ತಮ್ಮತಮ್ಮ ಅನಧಿಕೃತ ಫ್ಲೆಕ್ಸ್, ಬ್ಯಾನರ್‌ಗಳನ್ನು ಅಳವಡಿಸಿದ್ದು, ಅನಧಿಕೃತ ಫ್ಲೆಕ್ಸ್, ಬ್ಯಾನರ್‌ಗಳಿಗೆ ಅಲಂಕಾರಿಕ ದೀಪಗಳನ್ನು ಅಳವಡಿಸಲು ಮಂಗಳೂರು ನಗರ ಪಾಲಿಕೆಯಿಂದ ಅಳವಡಿಸಿರುವ ಕಂಬ ಮತ್ತು ವಿದ್ಯುತ್ ದೀಪಗಳಿಗೆ ಅತಿಕ್ರಮಣವಾಗಿ ವಿದ್ಯುತ್ ಸಂಪರ್ಕ ಪಡೆದಿರುವುದು ಕಂಡುಬಂದಿದೆ.

ಇಂತಹ ಅತಿಕ್ರಮಣ ಸಂಪರ್ಕಗಳಿಗೆ ಕಾನೂನು ಕ್ರಮಕೈಗೊಂಡು ದಂಡ ವಿಧಿಸಲಾಗುವುದು ಹಾಗೂ ಯಾವುದೇ ರೀತಿ ಅವಘಡಗಳು ಸಂಭವಿಸಿದ್ದಲ್ಲಿ ಫ್ಲೆಕ್ಸ್, ಬ್ಯಾನರ್ ಅಳವಡಿಸಿದವರನ್ನೇ ನೇರ ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ಮಂಗಳೂರು ಮಹಾನಗರ ಪಾಲಿಕೆ ಆಯುಕ್ತರು ಎಚ್ಚರಿಕೆ ನೀಡಿದ್ದಾರೆ.

Full View


Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News