ಅಕ್ರಮ ಮರಳು ಸಾಗಾಟ ಆರೋಪ: ಓರ್ವ ಸೆರೆ
Update: 2023-09-29 16:57 GMT
ಉಳ್ಳಾಲ: ಇಲ್ಲಿನ ಠಾಣಾ ವ್ಯಾಪ್ತಿಯ ಮುನ್ನೂರು ಎಂಬಲ್ಲಿ ಈಚರ್ ಲಾರಿಯಲ್ಲಿ ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಉಳ್ಳಾಲ ಪೊಲೀಸರು ದಾಳಿ ನಡೆಸಿ ವಾಹನವನ್ನು ವಶಪಡಿಸಿಕೊಂಡು ಆರೋಪಿಯನ್ನು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಲಾರಿ ಚಾಲಕ ಕಲಂದರ್ ಶಾಫಿ ಎಂದು ಗುರುತಿಸಲಾಗಿದೆ. ಈತ ಯಾವುದೇ ಪರವಾನಿಗೆ ಹಾಗೂ ದಾಖಲಾತಿ ಹೊಂದದೇ ಮುನ್ನೂರು ಗ್ರಾಮದ ರಾಣಿಪುರದಲ್ಲಿ ರಾಶಿ ಹಾಕಲಾದ ಮರಳನ್ನು ಸಾಗಾಟ ಮಾಡುತ್ತಿದ್ದ ಎಂದು ತಿಳಿದು ಬಂದಿದೆ.
ಈ ಮಾಹಿತಿ ಪಡೆದ ಉಳ್ಳಾಲ ಪೊಲೀಸರು ಶುಕ್ರವಾರ ದಾಳಿ ಮಾಡಿ ಆರೋಪಿಯನ್ನು ಬಂಧಿಸಿದ್ದಾರೆ. ಆರೋಪಿಯಿಂದ ಈಚರ್ ಲಾರಿ ಮತ್ತು ಮರಳನ್ನು ವಶಪಡಿಸಿಕೊಂಡಿದ್ದಾರೆ.
ಈ ಬಗ್ಗೆ ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.