ಅಕ್ರಮ ಮರಳುಗಾರಿಕೆಯಿಂದ ಸೇತುವೆಗೆ ಹಾನಿ ಸಾಧ್ಯತೆ: ಶಾಸಕ ಭರತ್ ಶೆಟ್ಟಿ

Update: 2024-08-22 13:17 GMT

ಮಂಗಳೂರು: ನಗರ ಹೊರವಲಯದ ಅಡ್ಡೂರು ಬಳಿ ಅಕ್ರಮ ಮರಳುಗಾರಿಕೆ ನಡೆಯುತ್ತಿದೆ ಎಂದು ಆಪಾದಿಸಿರುವ ಶಾಸಕ ಭರತ್ ಶೆಟ್ಟಿ, ಈ ಹಿಂದೆ ಅಕ್ರಮ ಮರಳುಗಾರಿಕೆಯಿಂದ ಮೂಲರಪಟ್ಣ ಸೇತುವೆ ಕುಸಿದಿತ್ತು. ಅದರಂತೆ ಪೊಳಲಿ ಸೇತುವೆಗೂ ಹಾನಿಯಾಗುವ ಸಾಧ್ಯತೆ ಇದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ನಗರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಅಡ್ಡೂರು ಬಳಿ ನಡೆಯುವ ಮರಳುಗಾರಿಕೆ ನಿಲ್ಲಿಸಲು ದ.ಕ.ಜಿಲ್ಲಾ ಉಸ್ತುವಾರಿ ಸಚಿವರು ಅಧಿಕಾರಿಗಳಿಗೆ ನಿರ್ದೇಶನ ನೀಡಬೇಕು ಎಂದು ಒತ್ತಾಯಿಸಿದರು.

ಈ ಹಿಂದೆ ಹಲವು ಬಾರಿ ಅಕ್ರಮ ಮರಳುಗಾರಿಕೆಯ ಬಗ್ಗೆ ಸಾಕ್ಷ್ಯ ಸಮೇತ ಜಿಲ್ಲಾಧಿಕಾರಿ ಸಹಿತ ಗಣಿ ಇಲಾಖೆಯ ಅಧಿಕಾರಿಗಳಿಗೆ ಮಾಹಿತಿ ನೀಡಲಾಗಿದೆ. ಆದರೂ ಅದನ್ನು ನಿಲ್ಲಿಸಿಲ್ಲ. ಸೇತುವೆಯ ಬಳಿಯಲ್ಲೇ ಅಕ್ರಮ ಮರಳುಗಾರಿಕೆ ಮಾಡುವುದರಿಂದ ಇದೀಗ ಸೇತುವೆಯನ್ನು ದುರಸ್ತಿ ಮಾಡುವಂತಾಗಿದೆ. ಅಕ್ರಮ ಮರಳುಗಾರಿಕೆಯನ್ನು ಶಾಶ್ವತವಾಗಿ ನಿಲ್ಲಿಸಲು ಅಧಿಕಾರಿಗಳು ಕ್ರಮ ಜರುಗಿಸಬೇಕು. ಇಲ್ಲದಿದ್ದರೆ ಮುಂದಿನ ಅನಾಹುತಗಳಿಗೆ ಅಧಿಕಾರಿಗಳೇ ಜವಾಬ್ದಾರರು ಎಂದು ಎಚ್ಚರಿಸಿದರು.

ಸುದ್ದಿಗೋಷ್ಠಿಯಲ್ಲಿ ಉತ್ತರ ಮಂಡಲ ಬಿಜೆಪಿ ಅಧ್ಯಕ್ಷ ರಾಜೇಶ್ ಕೊಠಾರಿ, ಮುಖಂಡರಾದ ಸಂದೀಪ್ ಪಚ್ಚನಾಡಿ, ಭರತ್‌ರಾಜ್ ಕೃಷ್ಣಾಪುರ, ಶ್ರವಣ್ ಶೆಟ್ಟಿ, ಆಶಿತ್ ನೋಂಡಾ ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News