ನ.16ರಿಂದ ಬಿಸಿಯೂಟ ಕಾರ್ಮಿಕರಿಂದ ಅನಿರ್ದಿಷ್ಟಾವಧಿ ಮುಷ್ಕರ
Update: 2023-11-14 13:55 GMT
ಮಂಗಳೂರು, ನ.14: ವಿವಿಧ ಬೇಡಿಕೆಗಳನ್ನು ಈಡೇರಿಸಲು ರಾಜ್ಯ ಸರಕಾರ ವಿಫಲವಾದ ಹಿನ್ನೆಲೆಯಲ್ಲಿ ನ.16ರಿಂದ ಬಿಸಿಯೂಟ ಕಾರ್ಮಿಕರು ಅನಿರ್ದಿಷ್ಟಾವಧಿ ಮುಷ್ಕರ ನಡೆಸಿ ಬೆಂಗಳೂರು ಪ್ರೀಡಂ ಪಾರ್ಕನಲ್ಲಿ ಮಹಾಧರಣಿ ನಡೆಸಲಿದ್ದಾರೆ. ಅ.30ರಿಂದ ಬೆಂಗಳೂರಿನಲ್ಲಿ ನಡೆಯುತ್ತಿರುವ ಅನಿರ್ಧಿಷ್ಟಾವಧಿ ಹೋರಾಟದ ಮುಂದುವರಿದ ಭಾಗವಾಗಿ ಈ ಮುಷ್ಕರ ನಡಯಲಿದೆ ಎಂದು ಕರ್ನಾಟಕ ರಾಜ್ಯ ಅಕ್ಷರ ದಾಸೋಹ ನೌಕರರ ಸಂಘದ ದ.ಕ. ಜಿಲ್ಲಾ ಸಮಿತಿಯ ಅಧ್ಯಕ್ಷೆ ಭವ್ಯಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಬೆಂಗಳೂರಿನ ಮುಷ್ಕರದಲ್ಲಿ ಭಾಗವಹಿಸಲು ಸಾಧ್ಯವಾಗದ ಬಿಸಿಯೂಟ ಕಾರ್ಮಿಕರು ನ.16ರಂದು ಬೆಳಗ್ಗೆ 9:30ಕ್ಕೆ ಕೊಟ್ಟಾರದಲ್ಲಿರುವ ದ.ಕ.ಜಿಪಂ ಮುಂದೆ ನಡೆಯುವ ಪ್ರತಿಭಟನೆಯಲ್ಲಿ ಭಾಗವಹಿಸಬಹುದಾಗಿದೆ. ಉಳಿದಂತೆ ಎಲ್ಲಾ ತಾಪಂ ಕಚೇರಿ ಮುಂದೆಯೂ ಪ್ರತಿಭಟನೆಗಳನ್ನು ನಡೆಸಲಾಗುವುದು ಎಂದು ತಿಳಿಸಿದ್ದಾರೆ.