ಅಂತಾರಾಷ್ಟ್ರೀಯ ಕರಾಟೆ ಚಾಂಪಿಯನ್ ಶಿಪ್: ಫಾತಿಮಾ ಶೈಫಾರಿಗೆ 2 ಪದಕ

Update: 2024-09-23 10:29 GMT

ಮಂಗಳೂರು: ಮಂಗಳೂರಿನ ಶೌರ್ಯ ಹಾಗೂ ಸೆಲ್ಫ್ ಡಿಫೆನ್ಸ್ ಸ್ಕೂಲ್ ಆಫ್ ಇಂಡಿಯನ್ ಕರಾಟೆ ಇತ್ತೀಚೆಗೆ ಆಯೋಜಿಸಿದ್ದ ಅಂತಾರಾಷ್ಟ್ರೀಯ ಕರಾಟೆ ಪಂದ್ಯಾಟದಲ್ಲಿ ಮೂಡುಬಿದಿರೆಯ ರೋಟರಿ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಫಾತಿಮಾ ಶೈಫಾ ಕಮಿಟೆ ವಿಭಾಗದಲ್ಲಿ ಬೆಳ್ಳಿ ಹಾಗೂ ಕಟಾ ವಿಭಾಗದಲ್ಲಿ ಕಂಚಿನ ಪದಕ ಜಯಿಸಿದ್ದಾರೆ.

ಇವರು ಮೂಡುಬಿದಿರೆಯ ರೆನ್ಶಿ ಮುಹಮ್ಮದ್ ನದೀಮ್ ರಲ್ಲಿ ತರಬೇತಿ ಪಡೆಯುತ್ತಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.

Tags:    

Writer - ವಾರ್ತಾಭಾರತಿ

contributor

Editor - Haneef

contributor

Byline - ವಾರ್ತಾಭಾರತಿ

contributor

Similar News