ಗುಡ್ಡ ಕುಸಿತದಿಂದ ಸಂಪರ್ಕ ಕಡಿತ: ಬೆಂಗಳೂರಿಗೆ ಹೆಚ್ಚುವರಿ ರೈಲು ಸೇವೆಗೆ ಸಂಸದ ಬ್ರಿಜೇಶ್ ಪತ್ರ

Update: 2024-07-19 08:53 GMT
ಸಾಂದರ್ಭಿಕ ಚಿತ್ರ

ಮಂಗಳೂರು, ಜು.19: ಗುಡ್ಡ ಕುಸಿತದಿಂದ ಮಂಗಳೂರು-ಬೆಂಗಳೂರು ನಡುವೆ ರಸ್ತೆ ಸಂಪರ್ಕ ಕಡಿತವಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರಿಗೆ ತುರ್ತಾಗಿ ಹೆಚ್ಚುವರಿ ರೈಲು ಸೇವೆ ಒದಗಿಸುವಂತೆ ಸಂಸದ ಕ್ಯಾ. ಬ್ರಿಜೇಶ ಚೌಟ ರೈಲ್ವೆ ಇಲಾಖೆಯ ಹಿರಿಯ ಅಧಿಕಾರಿಗಳಿಗೆ ಪತ್ರದ ಮೂಲಕ ಮನವಿ ಮಾಡಿದ್ದಾರೆ.

ವ್ಯಾಪಕ ಮಳೆಯಿಂದಾಗಿ ಮಂಗಳೂರು ಮತ್ತು ಬೆಂಗಳೂರನ್ನು ಸಂಪರ್ಕಿಸುವ ಮುಖ್ಯ ಎರಡೂ ರಾಷ್ಟೀಯ ಹೆದ್ದಾರಿಗಳಲ್ಲಿ ಗುಡ್ಡ ಕುಸಿತದಿಂದ ವಾಹನ ಸಂಪರ್ಕ ಕಡಿತವಾಗಿದೆ. ಹಾಗಾಗಿ ಮಂಗಳೂರು ಬೆಂಗಳೂರು ನಡುವೆ ಹೆಚ್ಚುವರಿ ರೈಲು ಸೇವೆಯನ್ನು ತುರ್ತಾಗಿ ಆರಂಭಿಸುವಂತೆ ಸಂಸದ ಕ್ಯಾ. ಬ್ರಿಜೇಶ್ ಚೌಟ, ನೈಋತ್ಯ ರೈಲ್ವೆ ಜನರಲ್ ಮ್ಯಾನೇಜರ್ ಮತ್ತು ಮೈಸೂರು ಡಿಆರ್ಎಂಗೆ ಪತ್ರ ಬರೆದಿದ್ದಾರೆ. ಮಂಗಳೂರು- ಬೆಂಗಳೂರು ನಗರಗಳ ನಡುವೆ ನಿತ್ಯ ಪ್ರಯಾಣಿಸುವ ಬಹು ಸಂಖ್ಯೆಯ ಪ್ರಯಾಣಿಕರಿದ್ದು, ಅವರಿಗೆ ಸಂಚಾರ ವ್ಯವಸ್ಥೆಯನ್ನು ಸುಗಮಗೊಳಿಸುವ ನಿಟ್ಟಿನಲ್ಲಿ ಹೆಚ್ಚುವರಿ ರೈಲು ಸೇವೆಯನ್ನು ಒದಗಿಸುವ ಅಗತ್ಯವಿದೆ. ಈ ಬಗ್ಗೆ ಕ್ರಮ ವಹಿಬೇಕು ಎಂದು ಅವರು ಮನವಿಯಲ್ಲಿ ಆಗ್ರಹಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Haneef

contributor

Byline - ವಾರ್ತಾಭಾರತಿ

contributor

Similar News