ಅಸಂಘಟಿತ ಕಾರ್ಮಿಕರಿಗೆ ಅಪಘಾತ ಪರಿಹಾರಕ್ಕೆ ಅರ್ಜಿ ಅಹ್ವಾನ

Update: 2023-11-10 13:23 GMT

ಮಂಗಳೂರು, ನ.10: ಕೇಂದ್ರ ಸರಕಾರವು ಅಸಂಘಟಿತ ಕಾರ್ಮಿಕರ ಸಮಗ್ರ ರಾಷ್ಟ್ರೀಯ ದತ್ತಾಂಶ ಕ್ರೋಢೀಕರಿಸುವ ಉದ್ದೇಶದಿಂದ 379 ವರ್ಗಗಳ ಎಲ್ಲಾ ಅಸಂಘಟಿತ ಕಾರ್ಮಿಕರನ್ನು ಇ-ಶ್ರಮ್ ಪೋರ್ಟಲ್‌ನಲ್ಲಿ ನೋಂದಾಯಿಸಲಾಗುತ್ತಿದೆ.

2021ರ ಆಗಸ್ಟ್ 26ರಿಂದ 2022ರ ಮಾರ್ಚ್ 31ರೊಳಗೆ ನೋಂದಣಿಯಾಗಿ ಮತ್ತು ಈ ದಿನಾಂಕದೊಳಗೆ ಅಪಘಾತ ಗೊಂಡ ಫಲಾನುಭವಿಗಳಿಗೆ ಪ್ರಧಾನಮಂತ್ರಿ ಸುರಕ್ಷಾ ಭೀಮಾ ಯೋಜನೆಯಡಿ 2 ಲಕ್ಷ ರೂ.ಗಳ ಅಪಘಾತ ಪರಿಹಾರವನ್ನು ಮಂಜೂರುಗೊಳಿಸಲು ಅಸಂಘಟಿತ ಕಾರ್ಮಿಕರು ಅರ್ಜಿ ಸಲ್ಲಿಸಬಹುದಾಗಿದೆ.

ಅಪಘಾತದಿಂದ ಮರಣ ಹೊಂದಿದಲ್ಲಿ ಫಲಾನುಭವಿಯ ಆಧಾರ್ ಸಂಖ್ಯೆ.ಯುಎಎನ್ ಕಾರ್ಡ್(ಇ-ಶ್ರಮ್‌ಕಾರ್ಡ್)ಸಂಖ್ಯೆ, ಮರಣ ಪ್ರಮಾಣ ಪತ್ರ, ವೈದ್ಯಕೀಯ ಪ್ರಮಾಣ ಪತ್ರ, ಎಫ್‌ಐಆರ್/ಪಂಚನಾಮೆ ಹಾಗೂ ಅಪಘಾತದಿಂದ ಅಂಗವೈಕಲ್ಯ ಹೊಂದಿದಲ್ಲಿ ಫಲಾನುಭವಿಯ ಆಧಾರ್ ಸಂಖ್ಯೆ, ಯುಎಎನ್‌ಕಾರ್ಡ್ (ಇ-ಶ್ರಮ್‌ಕಾರ್ಡ್) ಸಂಖ್ಯೆ, ಅಪಘಾತದಿಂದ ಉಂಟಾದ ಅಂಗವೈಕಲ್ಯವನ್ನು ಸೂಚಿಸುವ ಡಿಸ್ಚಾರ್ಜ್ ಸಾರಾಂಶ ಒಳಗೊಂಡ ಆಸ್ಪತ್ರೆಯ ದಾಖಲೆಗಳನ್ನು ಸಲ್ಲಿಸಬೇಕು. ಸಲ್ಲಿಸಬಹುದಾಗಿದೆ.

ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗೆ ಕಾರ್ಮಿಕ ಇಲಾಖೆಯ ಕಚೇರಿಯನ್ನು (ದೂ.ಸಂ: 0824-2435343/ 2433132) ಸಂಪರ್ಕಿಸಬಹುದು ಎಂದು ದ.ಕ. ಜಿಲ್ಲಾ ಕಾರ್ಮಿಕ ಇಲಾಖೆಯ ಅಧಿಕಾರಿಗಳು ಪ್ರಕಟನೆಯಲ್ಲಿ ತಿಳಿಸಿರುತ್ತಾರೆ.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News