ಜ.17: ಮುಖ್ಯಮಂತ್ರಿ ಸಿದ್ದರಾಮಯ್ಯ ದ.ಕ. ಜಿಲ್ಲಾ ಪ್ರವಾಸ

Update: 2025-01-15 13:50 GMT

ಮಂಗಳೂರು, ಜ.15: ಮುಖ್ಯಮಂತ್ರಿ ಸಿದ್ದರಾಮಯ್ಯ ಜ.17ರಂದು ದ.ಕ. ಜಿಲ್ಲೆಗೆ ಆಗಮಿಸಲಿದ್ದಾರೆ.

ಅಂದು ಪೂ.11:30ಕ್ಕೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸುವರು. ಬಳಿಕ ಮೇರಿಹಿಲ್‌ನಲ್ಲಿ ರಾಜೀವ್‌ಗಾಂಧಿ ಆರೋಗ್ಯ ವಿಜ್ಞಾನಗಳ ವಿವಿಯ ಮಂಗಳೂರು ಪ್ರಾದೇಶಿಕ ಕಚೇರಿ ಕಟ್ಟಡಕ್ಕೆ ಶಿಲಾನ್ಯಾಸ ನೆರವೇರಿಸುವರು.

ಮಧ್ಯಾಹ್ನ 12:15ಕ್ಕೆ ಪುರಭವನದಲ್ಲಿ ನಡೆಯುವ ಬಹುಸಂಸ್ಕೃತಿ ಉತ್ಸವ-ಕರ್ನಾಟಕ ಸುವರ್ಣ ಸಂಭ್ರಮ 50 ಉದ್ಘಾಟಿಸುವರು. ಸಂಜೆ 5ಕ್ಕೆ ಮಂಗಳಾ ಕ್ರೀಡಾಂಗಣದಲ್ಲಿ ಕರ್ನಾಟಕ ಕ್ರೀಡಾಕೂಟ ಉದ್ಘಾಟಿಸುವರು. ರಾತ್ರಿ 8ಕ್ಕೆ ಬೆಂಗಳೂರಿಗೆ ತೆರಳುವರು ಎಂದು ಪ್ರಕಟನೆ ತಿಳಿಸಿದೆ.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News