ಪರೀಕ್ಷೆಯಲ್ಲಿ ಜನಿವಾರ, ಮಾಂಗಲ್ಯ ತೆಗೆಸುವುದಿಲ್ಲ: ರೈಲ್ವೇ ಮಂಡಳಿ ಅಧಿಸೂಚನೆ
Update: 2025-04-28 17:25 IST

ಮಂಗಳೂರು : ರೈಲ್ವೆ ನೇಮಕಾತಿ ಮಂಡಳಿಯು ಇಲಾಖೆಯ ನರ್ಸಿಂಗ್ ಸೂಪರಿಂಟೆಂಡೆಂಟ್ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳಿಗೆ ಹೊರಡಿಸಿದ್ದ ಮಾರ್ಗಸೂಚಿಗೆ ಆಕ್ರೋಶ ವ್ಯಕ್ತವಾಗುತ್ತಿದ್ದಂತೆ ಮಂಡಳಿಯು ನೂತನ ಮಾರ್ಗಸೂಚಿ ಹೊರಡಿಸಿದೆ.
ನೂತನ ಮಾರ್ಗಸೂಚಿಯ ಪ್ರಕಾರ ಜನಿವಾರ, ಮಾಂಗಲ್ಯ ಇತ್ಯಾದಿ ಸಂಸ್ಕೃತಿಯನ್ನು ಬಿಂಬಿಸುವ ಯಾವುದೇ ವಸ್ತುವನ್ನು ಧರಿಸಿ ಬಂದಲ್ಲಿ ಅಭ್ಯರ್ಥಿಗಳಿಗೆ ತೊಂದರೆ ನೀಡಬಾರದು, ಪ್ರವೇಶ ನೀಡಬೇಕು ಎಂದು ಸೂಚನೆ ನೀಡಲಾಗಿದೆ.
ಎಪ್ರಿಲ್ 28, 29 ಮತ್ತು 30 ರಂದು ರೈಲ್ವೆ ಇಲಾಖೆಯಲ್ಲಿ ನೇಮಕಾತಿಗಾಗಿ ಪರೀಕ್ಷೆ ನಡೆಯುತ್ತಿದೆ. ಅಭ್ಯರ್ಥಿಗಳು ಜನಿವಾರ, ಮಾಂಗಲ್ಯ ಸೂತ್ರ ತೆಗೆದಿಟ್ಟು ಪರೀಕ್ಷೆ ಬರೆಯಬೇಕೆಂಬ ವಿಷಯವನ್ನು ಪರೀಕ್ಷಾ ನಿಯಮದಲ್ಲಿ ಉಲ್ಲೇಖಿಸಲಾಗಿದೆಯೆಂದು ಈ ಹಿಂದೆ ಆಕ್ರೋಶ ವ್ಯಕ್ತವಾಗಿತ್ತು.