ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಬಂಟ್ವಾಳ ತಾಲೂಕು ಅಧ್ಯಕ್ಷೆಯಾಗಿ ಜಯಂತಿ ವಿ.ಪೂಜಾರಿ ನೇಮಕ

Update: 2024-03-13 09:58 GMT

ಬಂಟ್ವಾಳ : ರಾಜ್ಯ ಸರಕಾರದ ಐದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ಸದಸ್ಯರಾಗಿ ಹಾಗೂ ಬಂಟ್ವಾಳ ತಾಲೂಕು ಅನುಷ್ಠಾನ ಸಮಿತಿಯ ಅಧ್ಯಕ್ಷರಾಗಿ ಜಯಂತಿ ವಿ. ಪೂಜಾರಿ ನೇಮಕಗೊಂಡಿದ್ದಾರೆ.

ಮಾಜಿ ಸಚಿವ ಬಿ.ರಮಾನಾಥ ರೈ ಅವರ ಶಿಫಾರಸ್ಸಿನ ಮೇರೆಗೆ ಜಯಂತಿ ವಿ.ಪೂಜಾರಿ ಅವರನ್ನು ಕರ್ನಾಟಕ ಸರ್ಕಾರ ನೇಮಕಗೊಳಿಸಿ ಆದೇಶ ಹೊರಡಿಸಿದೆ ಎನ್ನಲಾಗಿದ್ದು,  ಬಂಟ್ವಾಳದಿಂದ ಜಿಲ್ಲಾ ಸಮಿತಿ ಉಪಾಧ್ಯಕ್ಷರಾಗಿ ನಾರಾಯಣ ನಾಯ್ಕ, ಸದಸ್ಯರಾಗಿ ಬಿ.ಎಂ.ಅಬ್ಬಾಸ್ ಅಲಿ, ಸುದರ್ಶನ್ ಜೈನ್ ಅವರನ್ನು ಆಯ್ಕೆ ಮಾಡಲಾಗಿದೆ.

ಜಯಂತಿ ವಿ.ಪೂಜಾರಿ ಅವರು ಅನಂತಾಡಿ ಗ್ರಾಮದ ಬಾಕಿಲ ನಿವಾಸಿಯಾಗಿದ್ದು , ಪಾಣೆಮಂಗಳೂರು ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆಯಾಗಿ, ದ.ಕ.ಜಿಲ್ಲಾ ಕಾಂಗ್ರೆಸ್ ಸಮಿತಿ ಸದಸ್ಯೆಯಾಗಿ , ಶಿವಗಿರಿ ಮಹಿಳಾ ಸಹಕಾರಿ ಬ್ಯಾಂಕ್ ನ ಅಧ್ಯಕ್ಷೆಯಾಗಿ , ಮಾಣಿ ವಲಯ ಜನಜಾಗೃತಿ ವೇದಿಕೆಯ ಸದಸ್ಯೆಯಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.

ದ.ಕ.ಜಿಲ್ಲಾ ಕೆಡಿಪಿಯ ಮಾಜಿ ಸದಸ್ಯೆಯಾಗಿ, ಜನಜಾಗೃತಿ ವೇದಿಕೆ ಕಲ್ಲಡ್ಕ ವಲಯದ ಮಾಜಿ ಅಧ್ಯಕ್ಷೆಯಾಗಿಯೂ ಜಯಂತಿ ಅವರು ಸೇವೆ ಸಲ್ಲಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - jafar sadik

contributor

Byline - ವಾರ್ತಾಭಾರತಿ

contributor

Similar News