ಪತ್ರಕರ್ತ ವೇಣುಗೋಪಾಲ ನಿಧನ

Update: 2023-10-16 22:18 IST
ಪತ್ರಕರ್ತ ವೇಣುಗೋಪಾಲ ನಿಧನ
  • whatsapp icon

ಮೂಡುಬಿದಿರೆ ಪ್ರೆಸ್ ಕ್ಲಬ್ ನ ಮಾಜಿ ಅಧ್ಯಕ್ಷ, ಜಯಕಿರಣ ಪತ್ರಕೆಯ ಮೂಡುಬಿದಿರೆ ತಾಲೂಕು ವರದಿಗಾರ ಹಾಗೂ ಯುವ ನ್ಯಾಯವಾದಿ ವೇಣುಗೋಪಾಲ (30) ಇಂದು ಹೃದಯಾಘಾತದಿಂದ ನಿಧನರಾಗಿದ್ದಾರೆ.

ಕ್ರಿಯಾಶೀಲ ಪತ್ರಕರ್ತರಾಗಿದ್ದ ಅವರು ಇತ್ತೀಚಿನಿಂದ ಮೂಡುಬಿದಿರೆಯಲ್ಲಿ ಯುವ ನ್ಯಾಯವಾದಿಯಾಗಿ ಗಮನ ಸೆಳೆದಿದ್ದರು.

ಪತ್ರಿಕಾ ಕ್ಷೇತ್ರ ಮಾತ್ರವಲ್ಲದೆ ಸಾಂಸ್ಕೃತಿಕ ಹಾಗೂ ಇತರ ಕ್ಷೇತ್ರಗಳಲ್ಲೂ ತನ್ನನ್ನು ತೊಡಗಿಸಿಕೊಂಡಿದ್ದ ವೇಣುಗೋಪಾಲ ಅವರು ನಿನ್ನೆ ರಾತ್ರಿ ತನ್ನ ಸಹೋದರಿಯ ಮನೆಗೆ ಹೋಗಿದ್ದು ಇಂದು ಬೆಳಿಗ್ಗೆ ಅವರಿಗೆ ಹೃದಯಾಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ. ಸಚ್ಚೇರಿಪೇಟೆಯ ಆನಂದ ಪೂಜಾರಿ ಅವರ ಪುತ್ರರಾಗಿರುವ ವೇಣುಗೋಪಾಲ ಅವರು ಅವಿವಾಹಿತರಾಗಿದ್ದಾರೆ.

ಮೃತರ ನಿಧನಕ್ಕೆ ಮೂಡುಬಿದಿರೆ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಮೂಡುಬಿದಿರೆ ವಕೀಲರ ಸಂಘ ಮತ್ತು ಜಿಲ್ಲಾ ಪತ್ರಕರ್ತರ ಸಂಘ ಸಂತಾಪ ವ್ಯಕ್ತಪಡಿಸಿದೆ.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News