ಜು.22: ಶಾಲಾ ಶಿಕ್ಷಣ, ಸಾಕ್ಷರತಾ ಸಚಿವ ಎಸ್. ಮಧು ಬಂಗಾರಪ್ಪ ಪ್ರವಾಸ

Update: 2023-07-21 16:17 GMT

ಎಸ್. ಮಧು ಬಂಗಾರಪ್ಪ

ಮಂಗಳೂರು, ಜು.21: ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಎಸ್. ಮಧು ಬಂಗಾರಪ್ಪ ಜು.22ರಂದು ದ.ಕ. ಜಿಲ್ಲೆಯ ಪ್ರವಾಸ ಕೈಗೊಂಡಿದ್ದಾರೆ.

ಜು.22ರ ಬೆಳಗ್ಗೆ 10ಕ್ಕೆ ದ.ಕ.ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಕಾರ್ಯಕರ್ತರ ಸಭೆಯಲ್ಲಿ ಭಾಗವಹಿಸುವರು. ಪೂ.11ಕ್ಕೆ ನಗರದ ಜಪ್ಪಿನ ಮೊಗರುವಿನಲ್ಲಿ ಮುಸ್ಲಿಂ ಶಿಕ್ಷಣ ಸಂಸ್ಥೆಗಳ ಒಕ್ಕೂಟದಿಂದ ಆಯೋಜಿಸಿರುವ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಮಧ್ಯಾಹ್ನ 2:30ಕ್ಕೆ ದ.ಕ. ಜಿಪಂನ ನೇತ್ರಾವತಿ ಸಭಾಂಗಣದಲ್ಲಿ ಇಲಾಖಾ ಪ್ರಗತಿ ಪರಿಶೀಲನೆ ಸಭೆ ನಡೆಸುವರು. ರಾತ್ರಿ 9:50ಕ್ಕೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನದ ಮೂಲಕ ಬೆಂಗಳೂರಿಗೆ ತೆರಳುವರು ಎಂದು ಸಚಿವರ ಆಪ್ತ ಕಾರ್ಯದರ್ಶಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News