ಜು.22: ದ.ಕ.ಜಿಲ್ಲಾ ಉಸ್ತುವಾರಿ ಸಚಿವರ ಪ್ರವಾಸ

Update: 2023-07-21 16:08 GMT

ಮಂಗಳೂರು,ಜು.21: ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ದ.ಕ.ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಜು.22ರಂದು ದ.ಕ.ಜಿಲ್ಲೆಯ ಪ್ರವಾಸಕೈಗೊಂಡಿದ್ದಾರೆ.

ಜು.22ರ ಪೂರ್ವಾಹ್ನ 11:15ಕ್ಕೆ ನಗರದ ಜೆಪ್ಪುವಿನಲ್ಲಿರುವ ಪ್ರೆಸ್ಟೀಜ್ ಇಂಟರ್ ನ್ಯಾಷನಲ್ ಆಡಿಟೋರಿಯಂನಲ್ಲಿ ದ.ಕ. ಮತ್ತು ಉಡುಪಿಯ ಮುಸ್ಲಿಂ ಶಿಕ್ಷಣ ಸಂಸ್ಥೆಗಳ ಒಕ್ಕೂಟ (ರಿ)ದ ಆಶ್ರಯದಲ್ಲಿ ನಡೆಯುವ ಶೈಕ್ಷಣಿಕ ಸಮ್ಮೇಳನ ಪ್ರಶಸ್ತಿ ಪ್ರದಾನ-ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಭಾಗವಹಿಸುವರು.

ಸಂಜೆ 4:25ಕ್ಕೆ ಮಂಗಳೂರಿನಿಂದ ವಿಮಾನದ ಮೂಲಕ ಬೆಂಗಳೂರಿಗೆ ತೆರಳುವರು ಎಂದು ಸಚಿವರ ಆಪ್ತ ಕಾರ್ಯದರ್ಶಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News