ಕಡಬ | ಆಲಂಕಾರು ಪರಿಸರದಲ್ಲಿ ಹುಲಿ ಪ್ರತ್ಯಕ್ಷ: ಸ್ಥಳೀಯರಲ್ಲಿ ಆತಂಕ

Update: 2024-10-22 08:13 GMT

ಕಡಬ, ಅ.22: ತಾಲೂಕಿನ ಆಲಂಕಾರು ಪರಿಸರದಲ್ಲಿ ಬುಧವಾರ ಬೆಳಗ್ಗೆ ಹುಲಿಯೊಂದು ಕಂಡುಬಂದಿದ್ದು, ಸ್ಥಳೀಯರು ಭಯಭೀತರಾಗಿದ್ದಾರೆ.

ಅಲಂಕಾರು ಗ್ರಾಮದ ನೆಕ್ಕಿಲಾಡಿ ಬೈಲು ನೈಯಲ್ಗ ನಿವಾಸಿ ಜನಾರ್ದನ ಬಂಗೇರ ಎಂಬವರ ಮನೆಯ ಸಮೀಪ ಬುಧವಾರ ಬೆಳಗ್ಗೆ ಹುಲಿ ಕಂಡುಬಂದಿದೆ ಎನ್ನಲಾಗಿದೆ, ತಕ್ಷಣವೇ ಅವರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಉಪ ವಲಯ ಅರಣ್ಯಾಧಿಕಾರಿ ಜಯಕುಮಾರ್, ಗಸ್ತು ಅರಣ್ಯ ಪಾಲಕ ರವಿಕುಮಾರ್ ಭೇಟಿ ನೀಡಿ ಪರಿಶೀಲಿಸಿದ್ದಾರೆ.

ಸ್ಥಳದಲ್ಲಿ ಕಾಡುಪ್ರಾಣಿಯ ಹೆಜ್ಜೆ ಗುರುತು ಕಂಡುಬಂದಿದ್ದು, ಅದು ಚಿರತೆಯದ್ದೋ ಅಥವಾ ಹುಲಿಯದ್ದೋ ಅನ್ನುವುದು ಪರಿಶೀಲನೆಯ ಬಳಿಕ ತಿಳಿದು ಬರಬೇಕಿದೆ ಎಂದು ಅರಣ್ಯ ಅಧಿಕಾರಿಗಳು ಹೇಳಿದ್ದಾರೆ.


 



Tags:    

Writer - ವಾರ್ತಾಭಾರತಿ

contributor

Editor - Haneef

contributor

Byline - ವಾರ್ತಾಭಾರತಿ

contributor

Similar News