ಕಡೇಶ್ವಾಲ್ಯ: ಪ್ರೇಮ ವೈಫಲ್ಯ; ಯುವಕ ಆತ್ಮಹತ್ಯೆ

Update: 2023-10-20 07:17 GMT

ಬಂಟ್ವಾಳ : ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬಂಟ್ವಾಳ ನಗರ ಪೋಲೀಸ್ ಠಾಣಾ ವ್ಯಾಪ್ತಿಯ ಬಿ.ಮೂಡ ಗ್ರಾಮದ ಕಾಮಾಜೆ ಸಮೀಪದ ಮಿತ್ತಕೋಡಿ ಎಂಬಲ್ಲಿ ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡಿರುವ ಯುವಕನನ್ನು ‌ಕಡೇಶ್ವಾಲ್ಯ ಗ್ರಾಮದ ನೆಲ್ಲಿಗುಡ್ಡೆ ನಿವಾಸಿ ಸಚಿನ್ (24) ಎಂದು ಗುರುತಿಸಲಾಗಿದೆ. 

ಬಂಟ್ವಾಳದ ಇಲೆಕ್ಟ್ರಿಕಲ್ ಕಂಪೆನಿಯಲ್ಲಿ ಇಲೆಕ್ಟ್ರೀಷಿಯನ್ ಆಗಿ ಕೆಲಸ ಮಾಡುತ್ತಿದ್ದ ಸಚಿನ್ ಅ.18 ರಂದು ಕೆಲಸಕ್ಕೆ ಹೋದವನು ರಾತ್ರಿಯಾದರೂ ಮನೆಗೆ ಬಾರದೆ ಹಿನ್ನೆಲೆಯಲ್ಲಿ ಈತನನ್ನು ಹುಡುಕಾಟ ನಡೆಸಿದ್ದಾರೆ ಮುಂಜಾನೆ ಸುಮಾರು 3 ಗಂಟೆಯ ವೇಳೆ ಈತನ ಸ್ಕೂಟರ್ ಕಾಮಾಜೆ ಬಳಿ ಕಂಡುಬಂದಿದ್ದು ಪಕ್ಕದ ಗುಡ್ಡದಲ್ಲಿ ಶವ ಪತ್ತೆಯಾಗಿದೆ.

ಆತ್ಮಹತ್ಯೆ ಮಾಡುವ ಮೊದಲು ಈತ ಚೀಟಿಯನ್ನು ಬರೆದು ಕಿಸೆಯಲ್ಲಿಟ್ಟಿದ್ದು ಪ್ರೇಮ ವೈಫಲ್ಯ ಕಾರಣಕ್ಕಾಗಿ ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ಈತ ಚೀಟಿಯಲ್ಲಿ ಬರೆದಿದ್ದ ಎಂದು ಹೇಳಲಾಗಿದೆ.

ಬಂಟ್ವಾಳ ನಗರ ಠಾಣಾ ನಿರೀಕ್ಷಕ ಆನಂತ ಪದ್ಮನಾಭ ಮತ್ತು ಠಾಣಾಧಿಕಾರಿ ರಾಮಕೃಷ್ಣ ಅವರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - jafar sadik

contributor

Byline - ವಾರ್ತಾಭಾರತಿ

contributor

Similar News