ಕಲ್ಲಡ್ಕ: ಅನುಗ್ರಹ ಮಹಿಳಾ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಕಾರ್ಯಕ್ರಮ

Update: 2024-09-22 09:09 GMT

ಬಂಟ್ವಾಳ: ಅನುಗ್ರಹ ಮಹಿಳಾ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ ವತಿಯಿಂದ "ಹೆಣ್ಣುಮಕ್ಕಳ ಸಾಮಾನ್ಯ ಆರೋಗ್ಯ ಸಮಸ್ಯೆಗಳು" ಎಂಬ ವಿಷಯದ ಕುರಿತು ಉಪನ್ಯಾಸ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.

ಕಾರ್ಯಕ್ರಮದಲ್ಲಿ ಮುಖ್ಯ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಬಿ.ಸಿ.ರೋಡಿನ ತಜ್ಞ ವೈದ್ಯೆ ಡಾ. ವೀಣಾ ತೋಳ್ಪಾಡಿ ರವರು ವಿದ್ಯಾರ್ಥಿನಿಗಳೊಂದಿಗೆ ಸಂವಾದಿಸುತ್ತಾ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಸತತ ಪ್ರಯತ್ನ ಮುಖ್ಯವಾಗಿದೆ. ಅಂದರೆ ಆಹಾರದಲ್ಲಿ ಶಿಸ್ತು, ನಿಯಮಗಳನ್ನು ಪಾಲಿಸಬೇಕು. ಕಲಿತ ವಿಷಯಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವ ಮೂಲಕ ಆರೋಗ್ಯಕ್ಕೆ ಸಂಬಂಧಪಟ್ಟ ಹಲವಾರು ಸಮಸ್ಯೆಗಳಿಗೆ ಪರಿಹಾರವನ್ನು ಕಂಡುಕೊಳ್ಳಬಹುದು ಎಂದರು.

ವೇದಿಕೆಯಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಶ್ರೀಮತಿ ಹೇಮಲತ ಬಿ. ಡಿ., ಸಲಹಾ ಸಮಿತಿಯ ಕಾರ್ಯದರ್ಶಿಯಾದ ಶ್ರೀಮತಿ ತಾರಾಕ್ಷಿ, ಪದವಿ ಪೂರ್ವ ವಿಭಾಗದ ಸಂಯೋಜಕರಾದ ಶ್ರೀಮತಿ ಮಮಿತಾ ಎಸ್.ರೈ, ಪದವಿ ವಿಭಾಗದ ಸಂಯೋಜಕರಾದ ಶ್ರೀಮತಿ ಅಬಿದ.ಬಿ., ಮೌಲ್ಯ ಶಿಕ್ಷಣ ವಿಭಾಗದ ಮುಖ್ಯಸ್ಥೆ ಶ್ರೀಮತಿ ಸಲೀಮಾ, ರಾಷ್ಟ್ರೀಯ ಸೇವಾ ಯೋಜನೆ ಸಂಯೋಜಕರಾದ ಶ್ರೀಮತಿ ಶ್ರುತಿ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಸಲಹಾ ಸಮಿತಿಯ ಸದಸ್ಯರಾದ ಶ್ರೀಮತಿ ನವ್ಯ ಹಾಗೂ ಫಾತಿಮಾ ಶಫೀಕ, ಬೋಧಕ ಬೋಧಕೇತರ ವೃಂದದವರು ಮತ್ತು ವಿದ್ಯಾರ್ಥಿನಿಯರು ಇದ್ದರು.

ಕಾರ್ಯಕ್ರಮದಲ್ಲಿ ಕುಮಾರಿ ಸುಕೈಬಾ ಕಿರಾಅತ್ ಪಠಿಸಿ, ಕುಮಾರಿ ಸುರಯ್ಯ ಅತಿಥಿಗಳ ಪರಿಚಯ ಮಾಡಿದರು ಮತ್ತು ಕುಮಾರಿ ಶಿಬಹಾ ಸ್ವಾಗತಿಸಿ, ವಂದಿಸಿ ಕಾರ್ಯಕ್ರಮವನ್ನು ನಿರೂಪಿಸಿದರು.

Tags:    

Writer - ವಾರ್ತಾಭಾರತಿ

contributor

Editor - jafar sadik

contributor

Byline - ವಾರ್ತಾಭಾರತಿ

contributor

Similar News