ಸೈಂಟ್ ತೆರೆಸಾ ಸ್ಕೂಲ್‌ನಲ್ಲಿ ಕನ್ನಡ ರಾಜ್ಯೋತ್ಸವ

Update: 2023-11-01 16:15 GMT

ಮಂಗಳೂರು: ಬೆಂದೂರಿನ ಸೈಂಟ್ ತೆರೆಸಾ ಸ್ಕೂಲ್‌ನಲ್ಲಿ ಕನ್ನಡ ರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು.

ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ಪುತ್ತೂರು ಇದರ ಇತಿಹಾಸ ವಿಭಾಗದ ಪ್ರಾಧ್ಯಾಪಕರಾದ ಪ್ರೊ. ಸ್ಟೀವನ್ ಕ್ವಾಡ್ರಸ್ ಇವರು ಮುಖ್ಯ ಅತಿಥಿಯಾಗಿ ಆಗಮಿಸಿ ದೀಪ ಬೆಳಗಿಸುವುದರ ಮೂಲಕ ಕಾರ್ಯಕ್ರಮಕ್ಕೆ ವಿದ್ಯುಕ್ತ ಚಾಲನೆಯನ್ನು ನೀಡಿ, ಕನ್ನಡದ ಇತಿಹಾಸ ಮತ್ತು ಕನ್ನಡ ರಾಜ್ಯೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸುವುದರ ಮಹತ್ವವನ್ನು ತಿಳಿಸಿ ದರು. ನಾವು ನಮ್ಮ ನಾಡು ನುಡಿ ಸಂಸ್ಕೃತಿಯನ್ನು ಗೌರವಿಸಬೇಕೆಂದು ಈ ಸಂದರ್ಭದಲ್ಲಿ ಅವರು ಹೇಳಿದರು.

ಶಾಲಾ ಪ್ರಾಂಶುಪಾಲ ಭ. ಲೂರ್ಡ್ಸ್ ಅವರು ರಾಜ್ಯೋತ್ಸವದ ಶುಭ ಸಂದೇಶವನ್ನು ನೀಡಿದರು. ಶಾಲಾ ವಿದ್ಯಾರ್ಥಿಗಳು ಕನ್ನಡ ನಾಡು, ನುಡಿ, ಸಂಸ್ಕೃೃತಿಯನ್ನು ಬಿಂಬಿಸುವ ಸಾಂಸ್ಕೃತಿಕ ಕಾರ್ಯಕ್ರಮವನ್ನು ನಡೆಸಿಕೊಟ್ಟರು. ವಿದ್ಯಾರ್ಥಿನಿ ಡೆಲ್ವಿಯಾ ಕನ್ನಡ ರಾಜ್ಯೋತ್ಸವದ ಮಹತ್ವವನ್ನು ತಿಳಿಸಿದರು.

ವಿದ್ಯಾರ್ಥಿನಿ ಆಲ್ಡ್ರೀನ್ ಸ್ವಾಗತಿಸಿದರು. ಧನ್ಯ ವಂದಿಸಿದರು. ವಿದ್ಯಾರ್ಥಿನಿಯರಾದ ಧನ್ವಿ ಮತ್ತು ಶ್ರಾವಣಿ ಕಾರ್ಯಕ್ರಮ ನಿರೂಪಿಸಿದರು. ಶಿಕ್ಷಕ ಮತ್ತು ಶಿಕ್ಷಕೇತರ ಸಿಬ್ಬಂದಿ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. 

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News