ಕಣ್ಣೂರು: ಅಕ್ರಮ ಸಾಗಾಟದ ಮರಳು ವಶ

Update: 2023-09-25 15:22 GMT

ಸಾಂದರ್ಭಿಕ ಚಿತ್ರ

ಮಂಗಳೂರು, ಸೆ.25: ನಗರದ ಕಣ್ಣೂರು ಬೆಂಝ್ ಶೋ ರೂಮ್‌ನ ಹಿಂಬದಿಯ ನೇತ್ರಾವತಿ ನದಿ ಕಿನಾರೆಯಿಂದ ಮರಳನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಸ್ಥಳಕ್ಕೆ ಸೋಮವಾರ ಮಧ್ಯರಾತ್ರಿ ದಾಳಿ ನಡೆಸಿರುವುದಾಗಿ ಮಂಗಳೂರು ಸಿಸಿಬಿ ಪೊಲೀಸರು ತಿಳಿಸಿದ್ದಾರೆ.

ದಾಳಿ ವೇಳೆ ಆರೋಪಿಗಳು ಪರಾರಿಯಾಗಿದ್ದಾರೆ. ಮರಳು ಸಾಗಾಟಕ್ಕೆ ಬಳಸಿದ್ದ 5 ಟಿಪ್ಪರ್ ಲಾರಿಗಳು, ದೋಣಿ, ಮರಳನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಸೊತ್ತುಗಳ ಮೌಲ್ಯ 25.45 ಲ.ರೂ. ಮೌಲ್ಯ ಆಗಬಹುದು ಎಂದು ಪೊಲೀಸರು ಅಂದಾಜಿಸಿದ್ದಾರೆ.

ಸಿಸಿಬಿ ಘಟಕದ ಎಎಸ್ಸೈ ಮೋಹನ್ ಮತ್ತು ಸಿಬ್ಬಂದಿ ವರ್ಗವು ದಾಳಿಯಲ್ಲಿ ಪಾಲ್ಗೊಂಡಿತ್ತು.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News