ಕರ್ನಾಟಕ ಮುಸ್ಲಿಂ ಜಮಾಅತ್ ದ.ಕ. ಈಸ್ಟ್ ಜಿಲ್ಲಾ ಸಮಿತಿ ಅಸ್ತಿತ್ವಕ್ಕೆ

Update: 2023-07-21 17:15 GMT

ಪುತ್ತೂರು: ಕರ್ನಾಟಕ ಮುಸ್ಲಿಂ ಜಮಾಅತ್ ದ.ಕ. ಈಸ್ಟ್ ಜಿಲ್ಲಾ ಸಮಿತಿ ರಚನಾ ಸಭೆಯು ಗುರುವಾರ ರೋಟರಿ ಮನಿಷಾ ಹಾಲ್‌ನಲ್ಲಿ ನಡೆಯಿತು.

ಕರ್ನಾಟಕ ಮುಸ್ಲಿಂ ಜಮಾಅತ್ ರಾಜ್ಯ ಉಪಾಧ್ಯಕ್ಷ ಸಯ್ಯಿದ್ ಇಸ್ಮಾಯಿಲ್ ತಂಙಳ್ ಉಜಿರೆ ಸಭೆಯ ಅಧ್ಯಕ್ಷತೆ ವಹಿಸಿ ವಹಿಸಿ, ದುಆಃ ನೆರೆವೇರಿಸುವ ಮೂಲಕ ಸಭೆಗೆ ಚಾಲನೆ ನೀಡಿದರು.

ಕರ್ನಾಟಕ ಮುಸ್ಲಿಂ ಜಮಾಅತ್ ರಾಜ್ಯ ಪ್ರದಾನ ಕಾರ್ಯದರ್ಶಿ ಅಬೂ ಸುಫ್‌ಯಾನ್ ಎಚ್. ಐ. ಇಬ್ರಾಹಿಂ ಮದನಿ ಸಭೆಯನ್ನು ಉದ್ಘಾಟಿಸಿ ಮಾತನಾಡಿದರು. ರಾಜ್ಯ ಜಂಇಯ್ಯತುಲ್ ಉಲಮಾ ಕಾರ್ಯದರ್ಶಿ ಎಸ್.ಪಿ. ಹಂಝ ಸಖಾಫಿ ನೇತೃತ್ವದಲ್ಲಿ 14 ಪದಾಧಿಕಾರಿಗಳನ್ನು ಒಳಗೊಂಡ 31 ಮಂದಿ ಸದಸ್ಯರ ‘ಈಸ್ಟ್ ಜಿಲ್ಲಾ ಸಮಿತಿ’ಯನ್ನು ರಚಿಸಿದರು.

ಅಧ್ಯಕ್ಷರಾಗಿ ಅಬ್ದುರ‌್ರಹ್ಮಾನ್ ಹಾಜಿ ಅರಿಯಡ್ಕ, ಪ್ರಧಾನ ಕಾರ್ಯದರ್ಶಿಯಾಗಿ ಜಿ.ಮುಹಮ್ಮದ್ ಕಾಮಿಲ್ ಸಖಾಫಿ, ಕೋಶಾಧಿಕಾರಿಯಾಗಿ ಬಿ.ಪಿ. ಇಸ್ಮಾಯಿಲ್ ಹಾಜಿ ಬೈತಡ್ಕ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು.

ಉಪಾಧ್ಯಕ್ಷರಾಗಿ ಮುಹಮ್ಮದ್ ಕುಂಞಿ ಗೂನಡ್ಕ, ಎ.ಕೆ. ಅಹ್ಮದ್ ಪರಪ್ಪು, ಅಬ್ದುಲ್ ಹಮೀದ್ ಸಖಾಫಿ ಕೊಡಂಗಾಯಿ, ಕೆ.ಬಿ. ಕಾಸಿಂ ಹಾಜಿ ಮಿತ್ತೂರು, ಕಾರ್ಯದರ್ಶಿಯಾಗಿ ಕೆ.ಇ. ಅಬೂಬಕ್ಕರ್ ನೆಲ್ಯಾಡಿ, ಇಸ್ಮಾಯಿಲ್ ಮಾಸ್ಟರ್ ಮಂಗಳಪದವು, ಅಬ್ದುಲ್ ಕರೀಂ ಹಾಜಿ ಚೆನ್ನಾರ್, ಕಾಸಿಂ ಪದ್ಮುಂಜ, ಅಬ್ಬೋನು ಮದ್ದಡ್ಕ, ಅಬ್ದುಲ್ ಹಮೀದ್ ಸುಣ್ಣಮೂಲೆ ಹಾಗೂ ಮಾಧ್ಯಮ ಕಾರ್ಯದರ್ಶಿಯಾಗಿ ಹಾಜಿ ಯೂಸುಫ್ ಸಯೀದ್ ಪುತ್ತೂರು ಅವರನ್ನು ಆಯ್ಕೆ ಮಾಡಲಾಯಿತು.

ಕಾರ್ಯಕಾರಿ ಸಮಿತಿಯ ಸದಸ್ಯರಾಗಿ ಉಮರ್ ಮುಸ್ಲಿಯಾರ್ ಮರ್ಧಾಳ, ಅಶ್ರಫ್ ಸಖಾಫಿ ಸವಣೂರು, ಕೆ.ಎಂ. ಮುಸ್ತಫಾ ಸುಳ್ಯ, ಹನೀಫ್ ಹಾಜಿ ಇಂದ್ರಾಜೆ, ಅಬ್ಬಾಸ್ ಮದನಿ ಬಂಡಾಡಿ, ಅಬ್ಬಾಸ್ ಬಟ್ಲಡ್ಕ, ಇಕ್ಬಾಲ್ ಬಪ್ಪಳಿಗೆ, ಅಬ್ದುಲ್ಲಾ ಮುಸ್ಲಿಯಾರ್ ಬನ್ನೂರು, ಯು.ಕೆ. ಹನೀಫ್ ಉಜಿರೆ, ಪಿ.ಯು. ಅಬ್ದುರ‌್ರಹ್ಮಾನ್ ಮುಸ್ಲಿಯಾರ್ ನಾವೂರು, ಇಬ್ರಾಹೀಂ ಮುಸ್ಲಿಯಾರ್ ಕೊಡಂಗಾಯಿ, ಅಬ್ದುಲ್ ಖಾದಿರ್ ಸಖಾಫಿ ಕಡಂಬು, ಉಸ್ಮಾನ್ ಹಾಜಿ ಸೆರ್ಕಲ, ಉಸ್ಮಾನ್ ಮುಸ್ಲಿಯಾರ್ ಕುಂಬ್ರ, ಮುಹಮ್ಮದ್ ರಫಿ ಕಾಜೂರು, ಎಸ್‌ವೈಎಸ್ ಈಸ್ಟ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸ್ವಾಲಿಹ್ ಮುರ ಹಾಗೂ ಎಸ್ಸೆಸ್ಸೆಫ್ ಈಸ್ಟ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಬ್ದುಲ್ ಹಕೀಂ ಕಳಂಜಿಬೈಲ್ ಅವರನ್ನು ಆಯ್ಕೆ ಮಾಡಲಾಯಿತು.

ಸಭೆಯಲ್ಲಿ ಸಯ್ಯಿದ್ ಎಸ್.ಎಂ. ತಂಙಳ್ ಬೆಳ್ತಂಗಡಿ, ಎಸ್‌ವೈಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಎಂ ಬಿ. ಸ್ವಾದಿಕ್ ಮಾಸ್ಟರ್ ಮಲೆಬೆಟ್ಟು, ಕರ್ನಾಟಕ ಮುಸ್ಲಿಂ ಜಮಾಅತ್ ವೆಸ್ಟ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಬ್ದುರ‌್ರಹೀಂ ಸಅದಿ ಉಪಸ್ಥಿತರಿದ್ದರು. ಕರ್ನಾಟಕ ಮುಸ್ಲಿಂ ಜಮಾಅತ್ ರಾಜ್ಯ ಕಾರ್ಯದರ್ಶಿ ಅಶ್ರಫ್ ಕಿನಾರ ಕಾರ್ಯಕ್ರಮ ನಿರೂಪಿಸಿದರು.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News