ಕರ್ನಾಟಕ ಮುಸ್ಲಿಂ ಜಮಾಅತ್ ದ.ಕ. ಈಸ್ಟ್ ಜಿಲ್ಲಾ ವತಿಯಿಂದ ಜಿಲ್ಲಾ ಮಟ್ಟದ ಶಿಕ್ಷಕರ ಹಾಗೂ ಎಸ್‌ಡಿಎಂಸಿ ಅಧ್ಯಕ್ಷರ ಸಮಾವೇಶ

Update: 2023-09-18 09:59 GMT

ಬಂಟ್ವಾಳ : ಕರ್ನಾಟಕ ಮುಸ್ಲಿಂ ಜಮಾಅತ್ ದಕ್ಷಿಣ ಕನ್ನಡ ಈಸ್ಟ್ ಜಿಲ್ಲಾ ವತಿಯಿಂದ ಶಿಕ್ಷಕರ ದಿನಾಚರಣೆಯ ಅಂಗವಾಗಿ ಜಿಲ್ಲಾ ಮಟ್ಟದ ಮುಸ್ಲಿಂ ಶಿಕ್ಷಕರ ಹಾಗೂ ಎಸ್‌ಡಿಎಂ‌ಸಿ ಅಧ್ಯಕ್ಷರ ಸಮಾವೇಶವು ಮಿತ್ತೂರು ದಾರುಲ್ ಇರ್ಷಾದ್ ವಿದ್ಯಾಲಯ ಕೆಜಿಎನ್ ಕ್ಯಾಂಪಸ್ಸಿನಲ್ಲಿ ಭಾನುವಾರ ನಡೆಯಿತು.

ಸಯ್ಯಿದ್ ಎಸ್.ಎಂ ತಂಙಳ್ ಉಜಿರೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಕರ್ನಾಟಕ ಮುಸ್ಲಿಂ ಜಮಾಅತ್ ದ.ಕ. ಈಸ್ಟ್ ಜಿಲ್ಲಾಧ್ಯಕ್ಷ ಅಬ್ದುರ್ರಹ್ಮಾನ್ ಹಾಜಿ ಅರಿಯಡ್ಕ ಅಧ್ಯಕ್ಷತೆ ವಹಿಸಿದ್ದರು. ಕರ್ನಾಟಕ ಮುಸ್ಲಿಂ ಜಮಾಅತ್ ರಾಜ್ಯ ನಾಯಕ ಜಿ.ಎಂ.ಎಂ. ಕಾಮಿಲ್ ಸಖಾಫಿ ಕಾರ್ಯಕ್ರಮ ಉದ್ಘಾಟಿಸಿದರು.

ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದ ಬಿ.ಮೂಡ ಸರಕಾರಿ ಪದವಿ ಪೂರ್ವ ಕಾಲೇಜು ಉಪನ್ಯಾಸಕ ಅಬ್ದುಲ್ ರಝಾಕ್ ಅನಂತಾಡಿ ಅವರು ಮಾತನಾಡಿ , ವಿಧ್ಯಾರ್ಥಿಗಳ ಶಿಕ್ಷಣ, ಗುಣ ನಡೆತೆ, ತರಬೇತಿ ಮೊದಲಾದವುಗಳ ಬಗ್ಗೆ ವಿಷಯಗಳ ಮಂಡಿಸಿ, ಅದಕ್ಕೆ ಬೇಕಾದ ಪರಿಹಾರ ಮಾರ್ಗವನ್ನು ನಾವೆಲ್ಲರೂ ಕಂಡುಕೊಳ್ಳಬೇಕಾಗಿದೆ, ಕರ್ನಾಟಕ ಮುಸ್ಲಿಂ ಜಮಾಅತ್ ಅದಕ್ಕೆ ಮುನ್ನುಡಿ ಹಾಕಿದೆ, ಇಂತಹ ಕಾರ್ಯಕ್ರಮಗಳು ಪ್ರತಿ ಮೊಹಲ್ಲಾಗಳಲ್ಲಿ ನಡೆಯಲಿ ಎಂದು ಕಾರ್ಯಕ್ರಮದ ಬಗ್ಗೆ ಶ್ಲಾಘಿಸಿದರು. ಸಮಾವೇಶದಲ್ಲಿ ಭಾಗವಹಿಸಿದ ಪ್ರತಿನಿಧಿಗಳು ತಮ್ಮ ಅಭಿಪ್ರಾಯ ಮಂಡಿಸಿದರು.

ಕಾರ್ಯಕ್ರಮದ ಆರಂಭದಲ್ಲಿ ಮೌಲಿದ್ ಪಾರಾಯಣ ನಡೆಯಿತು. ಜಿಲ್ಲಾ ಉಪಾಧ್ಯಕ್ಷ ಅಬ್ದುಲ್ ಹಮೀದ್ ಸಖಾಫಿ ಕೊಡುಂಗಾಯಿ, ಸದಸ್ಯರಾದ ಅಬೂಬಕ್ಕರ್ ಸ‌ಅದಿ ಮಜೂರು, ಅಬ್ದುಲ್ ಖಾದಿರ್ ಸಖಾಫಿ ಕಡಂಬು, ಅಬ್ದುಲ್ಲಾ ಮುಸ್ಲಿಯಾರ್ ಪುತ್ತೂರು, ಉಸ್ಮಾನ್ ಮುಸ್ಲಿಯಾರ್ ಕುಂಬ್ರ, ಇಬ್ರಾಹಿಂ ಮುಸ್ಲಿಯಾರ್ ಕೊಡುಂಗಾಯಿ ಹಾಗೂ ಪಿ. ಯು. ಅಬ್ದುರ್ರಹ್ಮಾನ್ ಮುಸ್ಲಿಯಾರ್‌ ಮೊದಲಾದವರು ಉಪಸ್ಥಿತರಿದ್ದರು.

ಜಿಲ್ಲಾ ಸದಸ್ಯರಾದ ಕೆ.ಬಿ. ಕಾಸಿಂ ಹಾಜಿ ಪರ್ಲೋಟು, ಇಕ್ಬಾಲ್ ಬಪ್ಪಳಿಗೆ, ಹಾಜಿ ಅಬ್ದುಲ್‌ ಕರೀಂ ಚೆನ್ನಾರ್, ಮುಹಮ್ಮದ್ ಕುಂಞಿ ಜೋಗಿಬೆಟ್ಟು, ಉಮರ್ ತಾಜ್ ನೆಲ್ಯಾಡಿ, ಕೆಎಂ ಮುಸ್ತಫಾ ಸುಳ್ಯ, ಉಸ್ಮಾನ್ ಹಾಜಿ ಸೆರ್ಕಳ, ಯು. ಹನೀಫ್ ಉಜಿರೆ, ಮಾಣಿ ಸರ್ಕಲ್ ಅಧ್ಯಕ್ಷರಾದ ಇಬ್ರಾಹಿಂ ಸ‌ಅದಿ ಮಾಣಿ, ಕೋಶಾಧಿಕಾರಿ ಕಾಸಿಂ ಪಾಟ್ರಕೋಡಿ ಮೊದಲಾದವರು ಭಾಗವಹಿಸಿದ್ದರು.

ಜಿಲ್ಲಾ ಕಾರ್ಯದರ್ಶಿ ಇಸ್ಮಾಯಿಲ್ ಮಾಸ್ಟರ್ ಮಂಗಳಪದವು ಸ್ವಾಗತಿಸಿ, ಜಿಲ್ಲಾ ಸದಸ್ಯ ಅಬ್ಬಾಸ್ ಬಟ್ಲಡ್ಕ ವಂದಿಸಿದರು. ಜಿಲ್ಲಾ ಕಾರ್ಯದರ್ಶಿ ಅಬ್ದುಲ್ ಹಮೀದ್ ಸುಣ್ಣಮೂಲೆ ನಿರೂಪಿಸಿದರು. ಜಿಲ್ಲಾ ಕಾರ್ಯದರ್ಶಿ ಕೆ.ಇ. ಅಬೂಬಕ್ಕರ್ ನೆಲ್ಯಾಡಿ ಹಾಗೂ ಮಾಧ್ಯಮ ಕಾರ್ಯದರ್ಶಿ ಯೂಸುಫ್ ಸಯೀದ್ ನೇರಳಕಟ್ಟೆ ಸಹಕರಿಸಿದರು.

Tags:    

Writer - ವಾರ್ತಾಭಾರತಿ

contributor

Editor - jafar sadik

contributor

Byline - ವಾರ್ತಾಭಾರತಿ

contributor

Similar News