ಅನಂತಾಡಿಯಲ್ಲಿ ಕೆಸರುಗದ್ದೆ ಕ್ರೀಡಾ ಕೂಟ: ಮಕ್ಕಳೊಂದಿಗೆ ಕೆಸರಿನಲ್ಲಾಡಿದ ದ.ಕ. ಡಿಸಿ ಮುಲೈ ಮುಗಿಲನ್

Update: 2024-09-23 16:15 GMT

ವಿಟ್ಲ: ರೈತ ಸಂತೋಷವಾಗಿದ್ದರೆ ಇಡೀ ಜಗತ್ತೇ ಸಂತಸ ಪಡುವುದು, ಪ್ರತಿಯೊಬ್ಬರ ಆಹಾರವನ್ನು ಪೂರೈಸಿ ಎಲ್ಲರ ಹಸಿವು ನೀಗಿಸುವ ರೈತ ಯಾವಾಗಲೂ ಸಂತೋಷವಾಗಿರಬೇಕೆಂದು ದ.ಕ. ಡಿಸಿ ಮುಲೈ ಮುಗಿಲನ್ ಹೇಳಿದರು.

ಅವರು ರವಿವಾರ ಅನಂತಾಡಿ ಗ್ರಾಮದ ನವ ಭಾರತ್ ಯುವಕ ಸಂಘದ ವತಿಯಿಂದ ಪಡಿಪಿರೆ ಗದ್ದೆಯಲ್ಲಿ ಜರಗಿದ 6 ನೇ ವರ್ಷದ "ಕೆಸರ್ದ ಕಂಡೊಡು ಕುಸಲ್ದ ಗೊಬ್ಬುಲು ಕಾರ್ಯಕ್ರಮದಲ್ಲಿ ಭಾಗವಹಿಸಿ, ಮಕ್ಕಳ ಜೊತೆ ಕೆಸರಿನಲ್ಲಿ ಸಂಭ್ರಮಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ಅನೀಶ್ ಅಶ್ವತ್ತಾಡಿ ವಹಿಸಿದ್ದರು. ಡಾ ರೂಪಲತಾ ಕೊಂಗಲಾಯಿ ದ್ವಜಾರೋಹಣಗೈದರು. ಸಭಾ ಕಾರ್ಯಕ್ರಮವನ್ನು ಲಯನ್ಸ್ ಕ್ಲಬ್ ಮಾಣಿ ವಲಯ ಅಧ್ಯಕ್ಷ ರಾಮ್ ಕಿಶನ್ ರೈ ಉದ್ಘಾಟಿಸಿ ದರು. ಕ್ರೀಡಾಕೂಟವನ್ನು ದಕ್ಷಿಣ ಕನ್ನಡ ಜಿಲ್ಲಾ ಸರಕಾರಿ ನೌಕರ ಸಂಘದ ಮಾಜಿ ಅಧ್ಯಕ್ಷರಾದ ಸಂಜೀವ ಪೂಜಾರಿ ಹಾಗೂ ವಿಠಲ ಕೋಟ್ಯಾನ್ ಪೊಯ್ಯೆ ನೆರವೇರಿಸಿದರು.

ವೇದಿಕೆಯಲ್ಲಿ ಮಾಣಿ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಕಿರಣ್ ಹೆಗ್ಡೆ, ನಿವೃತ್ತ ಶಿಕ್ಷಕ ರಾಮಣ್ಣ ಗೌಡ ಕೋಂಗಲಾಯಿ, ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ನಾರ್ಶ ಮುಖ್ಯ ಶಿಕ್ಷಕ ಗೋಪಾಲಕೃಷ್ಣ ನೆರಳಕಟ್ಟೆ, ಸರಕಾರಿ ಪದವಿ ಪೂರ್ವ ಕಾಲೇಜು ವಾಮದಪದವಿನ ರಾಧಾಕೃಷ್ಣಮೂಲ್ಯ, ಮಲ್ಲರಾಯ ದೈವ ಪರಿಚರಕರು ಗಳಾದ ರಾಮಣ್ಣ ಗೌಡ, ಬಾಲಪ್ಪ ಮಡಿವಾಳ, ಲಕ್ಷ್ಮಣ ಪೂಜಾರಿ ಬಾಕಿಲ, ಪದ್ಮನಾಭ ಪೂಜಾರಿ ಈಡೆಮುಂಡೆವು ಮೊದಲಾದವರು ಉಪಸ್ಥಿತರಿದ್ದರು.

ಯತೀಶ್ ಪೂಂಜಾವು ಸ್ವಾಗತಿಸಿದರು ವೆಂಕಟೇಶ್ ಮಾಸ್ಟರ್ ಕಾರ್ಯಕ್ರಮ ನಿರೂಪಿಸಿದರು.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News