‘‘ಕಿಮ್ಸ್ ಯುಜಿ.ಮೆಡಿಕ್ವಿಜ್- 2023" ವೈದ್ಯಕೀಯ ರಸ ಪ್ರಶ್ನೆ ಸ್ಪರ್ಧಾಕೂಟ

Update: 2023-10-02 16:25 GMT

ಮಂಗಳೂರು , ಅ.2: ನಗರದ ಕಣಚೂರು ವೈದ್ಯಕೀಯ ಶಿಕ್ಷಣ ಮಹಾವಿದ್ಯಾಲಯದ ವೈದ್ಯಕೀಯ ಶಾಸ್ತ್ರ ವಿಭಾಗದ ಆಶ್ರಯದಲ್ಲಿ ವೈದ್ಯಕೀಯ ಶಾಸ್ತ್ರ ಶಿಕ್ಷಣ ವಿದ್ಯಾರ್ಥಿಗಳಿಗಾಗಿ 3ನೇ ವಾರ್ಷಿಕ ರಾಜ್ಯ ಮಟ್ಟದ ಅಂತರ್ ವೈದ್ಯಕೀಯ ಕಾಲೇಜು ರಸ ಪ್ರಶ್ನೆ ‘ಕಿಮ್ಸ್ ಯು.ಜಿ. ಮೆಡಿಕ್ವಿಜ್-2023’’ ಸ್ಪರ್ಧಾಕೂಟವನ್ನು ಅ.7ರಂದು ಬೆಳಗ್ಗೆ 10 ಗಂಟೆಗೆ ಕಾಲೇಜಿನ ಸಭಾಂಗಣದಲ್ಲಿ ಆಯೋಜಿಸಲಾಗಿದೆ.

ಕಣಚೂರು ವೈದ್ಯಕೀಯ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಹಾಜಿ ಯು.ಕೆ.ಮೋನು ವಿಜೇತರಿಗೆ ಪ್ರಶಸ್ತಿ ವಿತರಿಸಲಿರುವರು. ಕಾರ್ಯನಿರ್ವಾಹಕ ನಿರ್ದೇಶಕ ಅಬ್ದುಲ್ ರೆಹಮಾನ್,ಪ್ರಾಂಶುಪಾಲ ಡಾ. ರತ್ನಾಕರ ಯು.ಪಿ, ವೈದ್ಯಕೀಯ ಅಧೀಕ್ಷಕ ಡಾ. ಹರೀಶ್ ಶೆಟ್ಟಿ, ಮುಖ್ಯ ಆಡಳಿತ ಅಧಿಕಾರಿ ರೋಹನ್ ಮೋನಿಸ್ ಮತ್ತು ಕಣಚೂರು ಆರೋಗ್ಯ ವಿಜ್ಞಾನ ಸಂಸ್ಥೆ ಸಮಿತಿಯ ಅಧ್ಯಕ್ಷ ಡಾಮೊಹಮ್ಮದ್ ಇಸ್ಮಾಯೀಲ್ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿರುವರು.

ವಿವರಗಳಿಗೆ ಸ್ಪರ್ಧಾಕೂಟದ ಸಂಘಟಕ ಹಾಗೂ ವೈದ್ಯಕೀಯ ಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ ದೇವದಾಸ್‌ರೈ 98450 81145 ಇವರನ್ನು ಸಂಪರ್ಕಿಸಬಹುದು ಎಂದು ಪ್ರಕಟನೆ ತಿಳಿಸಿದೆ.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News