ಕಿನ್ನಿಗೋಳಿ - ಪದ್ಮನ್ನೂರು ಸಾರ್ವಜನಿಕ ಯಕ್ಷಗಾನ ಬಯಲಾಟ ಸಮಿತಿಯವರಿಗೆ ಅಭಿನಂದನೆ
Update: 2024-09-29 09:07 GMT
ಕಿನ್ನಿಗೋಳಿ : ಬಂಟ್ವಾಳ ತಾಲೂಕಿನ ಮಾಣಿ ಸಮೀಪದ ಕೊಡಾಜೆಯ ಐಕ್ಯ ವೇದಿಕೆ ಕೊಡಾಜೆ ಇದರ ವತಿಯಿಂದ ಕಿನ್ನಿಗೋಳಿ - ಪದ್ಮನ್ನೂರಿನ ಸಾರ್ವಜನಿಕ ಯಕ್ಷಗಾನ ಬಯಲಾಟ ಸಮಿತಿ, ಇದರ ಅದ್ಯಕ್ಷರು ಹಾಗೂ ಸರ್ವ ಸದಸ್ಯರಿಗೆ ಅಭಿನಂದನಾ ಕಾರ್ಯಕ್ರಮವು ಇಂದು (ಸ.29) ಸಂಜೆ ಸಂಜೆ 5.30 ಕ್ಕೆ ಪದ್ಮನ್ನೂರಿನ ಸಾರ್ವಜನಿಕ ಯಕ್ಷಗಾನ ಬಯಲಾಟ ಸುವರ್ಣ ಮಹೋತ್ಸವ ಸಭಾ ಭವನದಲ್ಲಿ ನಡೆಯಲಿದೆ.
ಐಕ್ಯ-ಭಾವೈಕ್ಯತೆಯನ್ನು ಮೈಗೂಡಿಸಿಕೊಂಡು ಸರ್ವ ಧರ್ಮೀಯ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ಮಾನವೀಯ ಮೌಲ್ಯಗಳಿಗೆ ಒತ್ತು ನೀಡುತ್ತಿರುವ ಹಿನ್ನಲೆಯಲ್ಲಿ ಸಾರ್ವಜನಿಕ ಯಕ್ಷಗಾನ ಬಯಲಾಟ ಸಮಿತಿಯ ಅಧ್ಯಕ್ಷರಿಗೆ ಸನ್ಮಾನ, ಹಾಗೂ ಪದಾಧಿಕಾರಿಗಳು ಹಾಗೂ ಸದಸ್ಯರಿಗೆ ಅಭಿನಂದನೆ, ಇವರಿಗೆ ಮಾರ್ಗದರ್ಶನ ನೀಡುತ್ತಿರುವ ಸ್ಥಳೀಯ ದೇವಸ್ಥಾನದ ಅರ್ಚಕರು, ಮಸೀದಿ ಖತೀಬರು ಹಾಗೂ ಚರ್ಚ್ ನ ಧರ್ಮಗುರುಗಳಿಗೆ ಗೌರವಾರ್ಪಣೆ, ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಐಕ್ಯ ವೇದಿಕೆ ಕೊಡಾಜೆಯ ಪ್ರಕಟಣೆ ತಿಳಿಸಿದೆ .