ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಕ್ರಿಕೆಟಿಗ ಕೆ.ಎಲ್. ರಾಹುಲ್ ಭೇಟಿ

Update: 2024-01-17 21:00 IST
ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಕ್ರಿಕೆಟಿಗ ಕೆ.ಎಲ್. ರಾಹುಲ್ ಭೇಟಿ
  • whatsapp icon

ಸುಬ್ರಹ್ಮಣ್ಯ: ಖ್ಯಾತ ಕ್ರಿಕೆಟಿಗ ಕೆ.ಎಲ್. ರಾಹುಲ್ ಬುಧವಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಭೇಟಿ ನೀಡಿದರು. 

ಕ್ಷೇತ್ರಕ್ಕೆ ಭೇಟಿ ನೀಡಿದ ಕೆ.ಎಲ್.ರಾಹುಲ್ ಮಹಾ ಪೂಜೆ ವೀಕ್ಷಿಸಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು. 

ಸ್ನೇಹಿತರ ಜೊತೆಗೆ ಕೆ.ಎಲ್.ರಾಹುಲ್ ಕುಕ್ಕೆಗೆ ಆಗಮಿಸಿದ್ದರು. ಈ ಸಂದರ್ಭದಲ್ಲಿ ದೇವಳದ ಅಧಿಕಾರಿಗಳು, ಸಿಬ್ಬಂದಿಗಳು ಅವರನ್ನು ಸ್ವಾಗತಿಸಿ, ಸನ್ಮಾನಿಸಿದರು.

ಅಭಿಮಾನಿಗಳು ರಾಹುಲ್ ಜೊತೆ ಫೋಟೊ ಕ್ಲಿಕ್ಕಿಸಿಕೊಂಡರು.

Tags:    

Writer - ವಾರ್ತಾಭಾರತಿ

contributor

Editor - Ashfaq

contributor

Byline - ವಾರ್ತಾಭಾರತಿ

contributor

Similar News