ಸ್ಕೌಟ್ ಜಿಲ್ಲಾ ಸಹಾಯಕ ಆಯುಕ್ತರಾಗಿ ಕೆಎಂಕೆ ಮಂಜನಾಡಿ ನೇಮಕ
Update: 2023-08-10 12:34 GMT
ಮಂಗಳೂರು, ಆ.10: ಭಾರತ್ ಸ್ಕೌಟ್ ಮತ್ತು ಗೈಡ್ಸ್ ಜಿಲ್ಲಾ ಸಹಾಯಕ ಆಯುಕ್ತರಾಗಿ ಸೈಯದ್ ಮದನಿ ಚಾರಿಟೇಬಲ್ ಟ್ರಸ್ಟ್ ವತಿಯಿಂದ ನಡೆಸಲ್ಪಡುತ್ತಿರುವ ಉಳ್ಳಾಲ ಹಳೆಕೋಟೆಯಲ್ಲಿರುವ ಸೈಯದ್ ಮದನಿ ವಿದ್ಯಾಸಂಸ್ಥೆಗಳ ಮುಖ್ಯ ಶಿಕ್ಷಕ ಕೆಎಂಕೆ ಮಂಜನಾಡಿ ಅವರನ್ನು ರಾಜ್ಯ ಮುಖ್ಯ ಆಯುಕ್ತ ಪಿಜಿಆರ್ ಸಿಂಧ್ಯಾ ನೇಮಕಗೊಳಿಸಿದ್ದಾರೆ.
ಕೆಎಂಕೆ ಮಂಜನಾಡಿ ಅವರು ಕರ್ನಾಟಕ ರಾಜ್ಯ ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಉಪಾಧ್ಯಕ್ಷರಾಗಿ, ಅನುದಾನಿತ ಶಾಲಾ ಶಿಕ್ಷಕರ ಸಂಘದ ದ.ಕ. ಜಿಲ್ಲಾ ಅಧ್ಯಕ್ಷರಾಗಿ, ಮಂಗಳೂರು ಶಿಕ್ಷಕರ ಸಹಕಾರಿ ಪತ್ತಿನ ಸಂಘದ ಉಪಾಧ್ಯಕ್ಷರಾಗಿದ್ದಾರೆ.