ಕೊಣಾಜೆ: ವಾಹನಗಳ ಬ್ಯಾಟರಿ ಕಳವು ಪ್ರಕರಣದ ಆರೋಪಿಯ ಸೆರೆ; ಸೊತ್ತು ವಶ

Update: 2024-02-15 05:51 GMT

ಮಂಗಳೂರು, ಫೆ.15: ವಾಹನಗಳ ಬ್ಯಾಟರಿ ಕಳವು ಪ್ರಕರಣಕ್ಕೆ ಸಂಬಂಧಿಸಿ ಆರೋಪಿಯೋರ್ವನನ್ನು ಬಂಧಿಸಿರುವ ಕೊಣಾಜೆ ಪೊಲೀಸರು 3.90 ಲಕ್ಷ ರೂ. ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ.

ರಿಯಾಝ್ ತಲಪಾಡಿ ಬಂಧಿತ ಆರೋಪಿ. ಈತನಿಂದ ಕಳವುಗೈದ ಬ್ಯಾಟರಿಗಳು ಹಾಗೂ ಕೃತ್ಯಕ್ಕೆ ಬಳಸಿದ ವಾಹನವನ್ನು ವಶಪಡಿಸಿಕೊಳ್ಳಲಾಗಿದೆ. ಅವುಗಳ ಒಟ್ಟು ಮೌಲ್ಯ 3,90,000 ರೂ. ಎಂದು ಪೊಲೀಸರು ತಿಳಿಸಿದ್ದಾರೆ.

ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಲಾರಿಗಳ ಬ್ಯಾಟರಿಗಳು ಕಳ್ಳತನವಾಗಿರುವ ಬಗ್ಗೆ ಜ.29ರಂದು ಪ್ರಕರಣ ದಾಖಲಾಗಿತ್ತು. ಈ ಬಗ್ಗೆ ತನಿಖೆ ನಡೆಸಿದ ಪೊಲೀಸರು ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Haneef

contributor

Byline - ವಾರ್ತಾಭಾರತಿ

contributor

Similar News