ಕೋಟಾ ನೋಟು ಪ್ರಕರಣ: 20 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಸೆರೆ

Update: 2023-09-28 08:44 GMT

ಬಂಟ್ವಾಳ, ಸೆ.28: ಕೋಟಾ ನೋಟು ಪ್ರಕರಣಕ್ಕೆ ಸಂಬಂಧಿಸಿ ಕಳೆದ 20 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯೋರ್ವನನ್ನು ಬಂಟ್ವಾಳ ನಗರ ಠಾಣಾ ಪೊಲೀಸರು ಬಂಧಿಸಿದ್ದಾರೆ.

ನೆಲ್ಯಾಡಿ ಸಮೀಪದ ಕೌಕ್ರಾಡಿ ಗ್ರಾಮದ ಮಣ್ಣಗುಂಡಿ ನಿವಾಸಿ ಇಬ್ರಾಹೀಂ ಬಂಧಿತ ಆರೋಪಿ.

2004ರಲ್ಲಿ ಕೋಟಾ ನೋಟು ಪ್ರಕರಣಕ್ಕೆ ಸಂಬಂಧಿಸಿ ಇಬ್ಬರ ಮೇಲೆ ಪ್ರಕರಣ ದಾಖಲಾಗಿತ್ತು. ಈ ಪೈಕಿ ಓರ್ವ ಆರೋಪಿ ಶರಣಾಗತನಾಗಿದ್ದರೆ, ಇನ್ನೋರ್ವ ಆರೋಪಿ ಇಬ್ರಾಹೀಂ ತಲೆಮರೆಸಿಕೊಂಡಿದ್ದ. ಇದೀಗ ನಗರ ಠಾಣಾ ಪೋಲೀಸ್ ನಿರೀಕ್ಷಕ ಆನಂತಪದ್ಮನಾಭ ಮತ್ತು ಠಾಣಾಧಿಕಾರಿ ರಾಮಕೃಷ್ಣರ ಮಾರ್ಗದರ್ಶನದಂತೆ ಸಿಬ್ಬಂದಿಯಾದ ಗಣೇಶ್ ಮತ್ತು ಗೋಪಾಲಕೃಷ್ಣ ಆರೋಪಿಯನ್ನು ನೆಲ್ಯಾಡಿಯಲ್ಲಿ ಬಂಧಿಸಿದ್ದಾರೆ.

ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯ ಆತನಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

Tags:    

Writer - ವಾರ್ತಾಭಾರತಿ

contributor

Editor - Haneef

contributor

Byline - ವಾರ್ತಾಭಾರತಿ

contributor

Similar News