ಮಾಣಿ: ಚಲಿಸುತ್ತಿದ್ದ ಸರಕಾರಿ ಬಸ್ಸಿನ ಡೀಸೆಲ್ ಟ್ಯಾಂಕ್ ಕಳಚಿ ರಸ್ತೆಗೆ ಬಿತ್ತು!
Update: 2025-01-02 09:19 GMT
ವಿಟ್ಲ: ಹೆದ್ದಾರಿಯಲ್ಲಿ ಸಂಚರಿಸುತ್ತಿದ್ದ ಕೆಎಸ್ಸಾರ್ಟಿಸಿ ಬಸ್ಸೊಂದರ ಡೀಸೆಲ್ ಟ್ಯಾಂಕ್ ಕಳಚಿ ಬಿದ್ದ ಹೆದ್ದಾರಿಗೆ ಬಿದ್ದ ಘಟನೆ ಮಾಣಿ ಸಮೀಪದ ಮಹಾವೀರ ಎಂಬಲ್ಲಿ ಗುರುವಾರ ನಡೆದಿದೆ.
ಮಂಗಳೂರಿನಿಂದ ಅರಸೀಕೆರೆಗೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚರಿಸುತ್ತಿದ್ದ ಸರಕಾರಿ ಬಸ್ ಮಾಣಿ ಸಮೀಪದ ಮಹಾವೀರ ಎಂಬಲ್ಲಿ ತಲುಪಿದಾಗ ಅದರ ಡೀಸೆಲ್ ಟ್ಯಾಂಕ್ ಏಕಾಏಕಿ ಕಳಚಿ ರಸ್ತೆಗೆ ಕಳಚಿದೆ.
ಈ ವೇಳೆ ಟ್ಯಾಂಕ್ ನಿಂದ ಡೀಸೆಲ್ ರಸ್ತೆಗೆ ಚೆಲ್ಲಿದ್ದು, ಯಾವುದೇ ಅಪಾಯ ಸಂಭವಿಸಿಲ್ಲ.
ಬಳಿಕ ಬಸ್ಸಿನಲ್ಲಿದ್ದ ಪ್ರಯಾಣಿಕರಿಗೆ ಬೇರೊಂದು ಬಸ್ಸಿನಲ್ಲಿ ಸಂಚಾರಕ್ಕೆ ವ್ಯವಸ್ಥೆ ಕಲ್ಪಿಸಲಾಯಿತು.
ಹೆದ್ದಾರಿ ಅವ್ಯವಸ್ಥೆಯಿಂದಾಗಿ ಈ ಘಟನೆ ಸಂಭವಿಸಿದೆ ಎಂದು ಸಾರ್ವಜನಿಕರು ದೂರಿದ್ದಾರೆ.