ಕುತ್ತಾರು ಮದನಿ ನಗರ ದುರಂತ ಪ್ರಕರಣ: ಸಂಸದ ಕ್ಯಾ. ಬ್ರಿಜೇಶ್ ಚೌಟ ಭೇಟಿ; ಶೀಘ್ರ ಪರಿಹಾರ ಒದಗಿಸಲು ಸೂಚನೆ

Update: 2024-06-30 09:47 GMT

ಮಂಗಳೂರು, ಜೂ. 30: ಕುತ್ತಾರು ಮದನಿ ನಗರದಲ್ಲಿ ಇತೀಚೆಗೆ ಪಕ್ಕದ ಮನೆಯ ಗೋಡೆ ಮನೆಯೊಂದರ ಮೇಲೆ ಕುಸಿದು ಒಂದೇ ಕುಟುಂಬದ ನಾಲ್ವರು ಮೃತಪಟ್ಟ ಪ್ರಕರಣದ ಘಟನಾ ಸ್ಥಳಕ್ಕೆ ರವಿವಾರ ಸಂಸದ ಕ್ಯಾ. ಬ್ರಿಜೇಶ್ ಚೌಟ ಭೇಟಿ ನೀಡಿ ಪರಿಶೀಲಿಸಿದರು.

ಸಂತ್ರಸ್ತರಿಗೆ ಶೀಘ್ರ ಪರಿಹಾರವನ್ನು ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದ ಅವರು ಇದೇ ಸಂದರ್ಭ, ಉಳ್ಳಾಲ- ಸೋಮೇಶ್ವರ ಭಾಗದ ಕಡಲ್ಕೊರೆತ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲಿಸಿದರು.

ಕಡಲ್ಕೊರೆತ ತೀವ್ರಗೊಂಡಿರುವ ಉಚ್ಚಿಲ, ಮೊಗವೀರಪಟ್ನ, ಬಟ್ಟಂಪಾಡಿ, ಸೀಗ್ರೌಂಡ್ ಪ್ರದೇಶಕ್ಕೆ ಭೇಟಿ ನೀಡಿದರು.

ಸಮುದ್ರತೀರದ ಮನೆಗಳಲ್ಲಿ ವಾಸವಾಗಿರುವವರು ಎಚ್ಚರಿಕೆ ವಹಿಸುವಂತೆ ಸೂಚಿಸಿದ ಸಂಸದ ಕ್ಯಾ. ಬ್ರಿಜೇಶ್, ಅಪಾಯದಂಚಿನಲ್ಲಿ ಇರುವ ಮನೆಮಂದಿಗೆ ತಾತ್ಕಾಲಿಕ ವ್ಯವಸ್ಥೆ ಕಲ್ಪಿಸುವಂತೆ ಜಿಲ್ಲಾಧಿಕಾರಿಗೆ ಸೂಚಿಸಿದರು.

ಉಳ್ಳಾಲ ತಾಲೂಕು ತಹಶಿಲ್ದಾರರಾದ ಪ್ರದೀಪ್ ಕುರುಡೇಕರ್, ಬಂದರು ಇಲಾಖೆಯ ಇಂಜಿನಿಯರ್ ಪ್ರವೀಣ್, ಉಳ್ಳಾಲ ತಾಲೂಕು ಕಂದಾಯ ನಿರೀಕ್ಷಕರು ಪ್ರಮೋದ್, ಬಿಜೆಪಿ ಜಿಲ್ಲಾಧ್ಯಕ್ಷರಾದ ಸತೀಶ್ ಕುಂಪಲ, ಸಂತೋಷ್ ಬೋಳಿಯಾರ್ ಮೊದಲಾದವರು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - jafar sadik

contributor

Byline - ವಾರ್ತಾಭಾರತಿ

contributor

Similar News