ಮದ್ದಡ್ಕ: ಯುವಕನಿಗೆ ವಿನಾ ಕಾರಣ ಹಲ್ಲೆ ಪ್ರಕರಣ; ಪೊಲೀಸರ ವಿರುದ್ಧ ಕ್ರಮ ಕೈಗೊಳ್ಳುವಂತೆ ಗೃಹ ಸಚಿವರಿಗೆ ಮನವಿ

Update: 2024-12-07 13:48 IST
ಮದ್ದಡ್ಕ: ಯುವಕನಿಗೆ ವಿನಾ ಕಾರಣ ಹಲ್ಲೆ ಪ್ರಕರಣ; ಪೊಲೀಸರ ವಿರುದ್ಧ ಕ್ರಮ ಕೈಗೊಳ್ಳುವಂತೆ ಗೃಹ ಸಚಿವರಿಗೆ ಮನವಿ
  • whatsapp icon

ಬೆಳ್ತಂಗಡಿ; ಮದ್ದಡ್ಕ ನಿವಾಸಿ ಸುಹೈಲ್ ಪಾಷಾ ಎಂಬವರ ಮೇಲೆ ವಿನಾ ಕಾರಣ ಪೊಲೀಸರು ಹಲ್ಲೆ ನಡೆಸಿದ ಪ್ರಕರಣದ ಬಗ್ಗೆ ತನಿಖೆ ನಡೆಸಿ ಕ್ರಮ ಕೈಗೊಳ್ಳುವಂತೆ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಅವರು ರಾಜ್ಯ ಸರಕಾರದ ಗೃಹ ಸಚಿವರಿಗೆ ಪತ್ರ ಬರೆದಿದ್ದಾರೆ.

ಡಿ. 5 ರಂದು ಎನ್.ಐ.ಎ ತನಿಖಾ ತಂಡದವರು ಹಾಗೂ ಸ್ಥಳೀಯ ಪೊಲೀಸರು ಸುಹೈಲ್ ನನ್ನು ವಶಕ್ಕೆ ಪಡೆದು ವಿಚಾರಣೆ ನೆಪದಲ್ಲಿ ಹಲ್ಲೆ ನಡೆಸಿದ್ದರು ಎಂದು ಆರೋಪಿಸಲಾಗಿತ್ತು. ಹಾಗೂ ಸುಹೈಲ್ ಅವರು ಮಂಗಳೂರಿ‌ನ ಆಸ್ಪತ್ರೆಗೆ ದಾಖಲಾಗಿದ್ದರು.

ಘಟನೆಯ ಬಗ್ಗೆ ತನಿಖೆ ನಡೆಸಿ ಕ್ರಮ ಕೈಗೊಳ್ಳುವಂತೆ ಕೆಪಿಸಿಸಿ ಕಾರ್ಯದರ್ಶಿ ರಕ್ಷಿತ್ ಶಿವರಾಂ ಅವರು ಉಸ್ತುವಾರಿ ಸಚಿವರಿಗೆ ಮನವಿ ನೀಡಿದ್ದರು. ಅದರಂತೆ ಇದೀಗ ಸಚಿವ ದಿನೇಶ್ ಗುಂಡೂರಾವ್ ಅವರು ಗೃಹಸಚಿವರಿಗೆ ಪತ್ರ ಬರೆದು ತನಿಖೆ ನಡೆಸಿ ಕ್ರಮ ಕೈಗೊಳ್ಳುವಂತೆ ವಿನಂತಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - jafar sadik

contributor

Byline - ವಾರ್ತಾಭಾರತಿ

contributor

Similar News