ಮಜ್ಲಿಸ್ ಪಬ್ಲಿಕ್ ಸ್ಕೂಲ್ ವಿದ್ಯಾರ್ಥಿಗಳು ರಾಷ್ಟ್ರ ಮಟ್ಟಕ್ಕೆ ಆಯ್ಕೆ

Update: 2024-08-20 13:40 GMT

ಮಂಗಳೂರು: ಮೂಡುಬಿದಿರೆಯಲ್ಲಿ ಶೋರಿನ್ ರಿಯು ಕರಾಟೆ ಅಶೋಸಿಯೇಶನ್ ಮತ್ತು ಸ್ವಾಮಿಸ್ಟ್ರೆನ್ತ್ ಟ್ರೇನಿಂಗ್ ಸಹಯೋಗದಲ್ಲಿ ಇತ್ತೀಚೆಗೆ ನಡೆದ 21ನೇ ರಾಜ್ಯ ಮಟ್ಟದ ಕರಾಟೆ ಚಾಂಪಿಯನ್ ಶಿಪ್-2024ರ ಸ್ಪರ್ಧೆಯಲ್ಲಿ ಮಜ್ಲಿಸ್ ಪಬ್ಲಿಕ್ ಸ್ಕೂಲ್ ಗಾಣೆಮಾರ್ 11 ವಿದ್ಯಾರ್ಥಿಗಳು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

7 ವಿದ್ಯಾರ್ಥಿಗಳು ಪ್ರಥಮ ಸ್ಥಾನ ಪಡೆದು ಚಿನ್ನದ ಪದಕ, 4 ವಿದ್ಯಾರ್ಥಿಗಳು ದ್ವಿತೀಯ ಸ್ಥಾನದೊಂದಿಗೆ ಬೆಳ್ಳಿ ಪದಕ, 6 ವಿದ್ಯಾರ್ಥಿಗಳು ತೃತೀಯ ಸ್ಥಾನದೊಂದಿಗೆ ಕಂಚಿನ ಪದಕಗಳ ಸಾಧನೆಗೈದಿರುವರು ಎಂದು ಪ್ರಕಟನೆ ತಿಳಿಸಿದೆ.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News