ಬೆಳ್ತಂಗಡಿ | ಬೈಕ್ ಅಪಘಾತ : ಯುವ ಭಾಗವತ ಸ್ಥಳದಲ್ಲೇ ಸಾವು

Update: 2025-03-31 23:38 IST
ಬೆಳ್ತಂಗಡಿ | ಬೈಕ್ ಅಪಘಾತ : ಯುವ ಭಾಗವತ ಸ್ಥಳದಲ್ಲೇ ಸಾವು
  • whatsapp icon

ಬೆಳ್ತಂಗಡಿ: ಬೈಕ್ ಗಳ ನಡುವೆ ನಡೆದ ಅಪಘಾತದಲ್ಲಿ ಭಾಗವತರೊಬ್ಬರು ಸಾವನ್ನಪ್ಪಿದ ಘಟನೆ ಅಂಡಿಂಜೆಯಲ್ಲಿ ಸೋಮವಾರ ಮುಂಜಾನೆ ನಡೆದಿದೆ. ಅಂಡಿಂಜೆ ಗ್ರಾಮದ ನಿವಾಸಿ ದಿ| ಅಣ್ಣಿ ಆಚಾರ್ಯ ಅವರ  ಪುತ್ರ, ಮಂಗಳಾದೇವಿ ಯಕ್ಷಗಾನ ಮೇಳದ ಭಾಗವತ ಸತೀಶ್ ಆಚಾರ್ಯ (40) ಮೃತಪಟ್ಟವರು.

ಸುಳ್ಯದಲ್ಲಿ ನಡೆದ ಯಕ್ಷಗಾನ ಕಾರ್ಯಕ್ರಮವನ್ನು ಮುಗಿಸಿ  ಹಿಂದಿರುಗುತ್ತಿದ್ದ ವೇಳೆ ಅಂಡಿಂಜೆ ಕಿಲಾರ ಮಾರಿಗುಡಿ ದೇವಸ್ಥಾನದ ಸಮೀಪದ ತಿರುವು ರಸ್ತೆಯಲ್ಲಿ ಎದುರಿನಿಂದ ಬರುತ್ತಿದ್ದ ಬೈಕ್ ನಡುವೆ ಅಪಘಾತ ನಡೆದಿದೆ. ಢಿಕ್ಕಿಯ ರಭಸಕ್ಕೆ ರಸ್ತೆಗೆ ಬಿದ್ದು ಗಂಭೀರ ಗಾಯಗೊಂಡ ಸತೀಶ್ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮತ್ತೊಂದು ಬೈಕ್‌ನಲ್ಲಿದ್ದವರಿಗೂ ಗಾಯವಾಗಿದೆ.

ಮೃತರು ತಾಯಿ, ಸಹೋದರಿ, ಸಹೋದರ ಹಾಗೂ ಬಂಧು ವರ್ಗದವರನ್ನು ಅಗಲಿದ್ದಾರೆ. 

Tags:    

Writer - ವಾರ್ತಾಭಾರತಿ

contributor

Editor - Ashik

contributor

Byline - ವಾರ್ತಾಭಾರತಿ

contributor

Similar News