ಮಂಚಿ ಗ್ರಾ.ಪಂ.: ಅಧ್ಯಕ್ಷರಾಗಿ ಜಿ.ಎಂ. ಇಬ್ರಾಹಿಂ, ಉಪಾಧ್ಯಕ್ಷರಾಗಿ ಗೀತಾ ಆಯ್ಕೆ

Update: 2023-08-10 17:45 GMT

ಬಂಟ್ವಾಳ : ಮಂಚಿ ಗ್ರಾಮ ಪಂಚಾಯತ್ ನ ಎರಡನೇ ಅವಧಿಗೆ ಗುರುವಾರ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಸದಸ್ಯರಾದ ಜಿ.ಎಂ.ಇಬ್ರಾಹಿಂ ಅಧ್ಯಕ್ಷರಾಗಿ ಹಾಗೂ ಗೀತಾ ಅವರು ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.

ಮಂಚಿ ಗ್ರಾಮ ಪಂಚಾಯತ್ ಒಟ್ಟು 21 ಸದಸ್ಯರನ್ನು ಹೊಂದಿದ್ದು ಈ ಪೈಕಿ 11 ಕಾಂಗ್ರೆಸ್ ಬೆಂಬಲಿತ ಹಾಗೂ 10 ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಸದಸ್ಯರಾಗಿ ಆಯ್ಕೆಯಾಗಿದ್ದರು.

ಅಧ್ಯಕ್ಷ ಸ್ಥಾನ ಸಾಮಾನ್ಯ ಮತ್ತು ಉಪಾಧ್ಯಕ್ಷ ಸ್ಥಾನ ಹಿಂದುಳಿದ ವರ್ಗ ಎ ಗೆ ಮೀಸಲಾಗಿದ್ದು ಅಧ್ಯಕ್ಷ ಸ್ಥಾನಕ್ಕೆ ಜಿ.ಎಂ. ಇಬ್ರಾಹಿಂ ಮತ್ತು ಮೋಹನದಾಸ ಶೆಟ್ಟಿ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಗೀತಾ ಮತ್ತು ವಿಜಯ ನಾಮಪತ್ರ ಸಲ್ಲಿಸಿದ್ದರು.

ಅಧ್ಯಕ್ಷ ಸ್ಥಾನಕ್ಕೆ ನಡೆದ ಮತದಾನದಲ್ಲಿ ಜಿ.ಎಂ.ಇಬ್ರಾಹಿಂ 12 , ಮೋಹನದಾಸ ಶೆಟ್ಟಿ 9 ಮತಗಳು ಹಾಗೂ ಉಪಾಧ್ಯಕ್ಷ ಸ್ಥಾನದ ಮತದಾನದಲ್ಲಿ ಗೀತಾ 11 ಮತ್ತು ವಿಜಯ 10 ಮತಗಳನ್ನು ಪಡೆದರು.

ಸಣ್ಣ ನೀರಾವರಿ ವಿಭಾಗದ ಸಹಾಯಕ ಇಂಜಿನಿಯರ್ ಶಿವಪ್ರಸನ್ನ ಡಿ.ಎಂ. ಚುನಾವಣಾ ಅಧಿಕಾರಿಯಾಗಿ ಕಾರ್ಯ ನಿರ್ವಹಿಸಿದರು, ಪಂಚಾಯತ್ ಅಭಿವೃದ್ಧಿ ಅಧಿಕಾರಿ ನಿರ್ಮಲಾ ಸಹಕರಿಸಿದರು.




Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News