ಮಂಗಳೂರು: 100 ಕೆಜಿ ಮಾದಕ ವಸ್ತು ಮಿಶ್ರಿತ ಚಾಕಲೇಟ್ ಪತ್ತೆ

Update: 2023-07-20 16:54 GMT

ಮಂಗಳೂರು, ಜು.20: ನಗರದ ರಥಬೀದಿಯ ಪೂಜಾಸಾಮಗ್ರಿಯ ಅಂಗಡಿಯೊಂದರಲ್ಲಿ 100 ಕೆಜಿ ಮಾದಕ ವಸ್ತು ಮಿಶ್ರಿತ ಚಾಕಲೇಟ್ ಬುಧವಾರ ಪತ್ತೆಯಾಗಿದೆ. ಆ ಹಿನ್ನಲೆಯಲ್ಲಿ ಬಂದರು ಪೊಲೀಸರು ಶೋಧ ಕಾರ್ಯಾಚರಣೆಯನ್ನು ಬಿರುಸುಗೊಳಿಸಿದ್ದಾರೆ.

ನಗರದ ಬಂದರು, ರಥಬೀದಿ ಸುತ್ತಮುತ್ತಲ ಪ್ರದೇಶದ 60ಕ್ಕೂ ಅಧಿಕ ಅಂಗಡಿಯಲ್ಲಿ ಗುರುವಾರ ಪೊಲೀಸರು ಶೋಧವನ್ನು ನಡೆಸಿದ್ದಾರೆ. ಶಾಲಾ-ಕಾಲೇಜು ವಿದ್ಯಾರ್ಥಿಗಳನ್ನು ಗುರಿಯಾಗಿಸಿಕೊಂಡು ಮಾದಕ ವಸ್ತು ಮಿಶ್ರಿತ ಚಾಕಲೇಟ್ ಮಾರಾಟ ಮಾಡಲಾಗುತ್ತಿತ್ತು ಎಂದು ಹೇಳಲಾಗಿದೆ.

ನಗರದ ಹಲವೆಡೆ ಮಾದಕ ವಸ್ತು ಮಿಶ್ರಿತ ಚಾಕಲೇಟ್ ಮಾರಾಟ ಮಾಡುತ್ತಿರುವ ದೂರುಗಳು ಬಂದ ಹಿನ್ನೆಲೆಯಲ್ಲಿ ಬಂದರು ಇನ್‌ಸ್ಪೆಕ್ಟರ್ ರಾಘವೇಂದ್ರ ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿತ್ತು.

ಈ ವೇಳೆ ನಗರದ ರಥಬೀದಿ ಮತ್ತು ಫಳ್ನೀರ್ ಗೂಡಂಗಡಿಯಲ್ಲಿ 100 ಕೆಜಿ ಮಾದಕ ವಸ್ತು ಮಿಶ್ರಿತ ಚಾಕಲೇಟ್ ಪತ್ತೆಯಾಗಿತ್ತು. ಈ ಚಾಕ್‌ಲೇಟ್‌ಗಳನ್ನು ಉತ್ತರ ಭಾರತದಿಂದ ತರಿಸಿಕೊಳ್ಳಲಾಗುತ್ತಿದೆ ಎಂದು ತಿಳಿದು ಬಂದಿದೆ.

ಈ ಚಾಕ್‌ಲೆಟ್‌ನಲ್ಲಿ ಒಳಗೊಂಡಿರುವ ಅಂಶವನ್ನು ಪತ್ತೆಹಚ್ಚುವ ಸಲುವಾಗಿ ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ಮಾದಕ ವಸ್ತು ಮಿಶ್ರಿತ ಚಾಕಲೇಟ್ ಕಳುಹಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News