ಮಂಗಳೂರು: ಹಾಸ್ಟೆಲ್‌ನಿಂದ 4 ಮೊಬೈಲ್ ಫೋನ್‌ ಕಳವು

Update: 2023-09-23 17:08 GMT

ಮಂಗಳೂರು, ಸೆ.23: ನಗರದ ಬಂದರ್‌ನ ಶ್ರೀ ದೇವರಾಜ ಅರಸು ಹಿಂದುಳಿದ ವರ್ಗಗಳ ಮೆಡಿಕಲ್ ಮತ್ತು ಇಂಜಿನಿಯರಿಂಗ್ ವಿದ್ಯಾರ್ಥಿಗಳ ಹಾಸ್ಟೆಲ್‌ನಿಂದ ವಿದ್ಯಾರ್ಥಿಗಳ ನಾಲ್ಕು ಮೊಬೈಲ್ ಫೋನ್‌ಗಳು ಕಳವಾಗಿರುವ ಘಟನೆ ವರದಿಯಾಗಿದೆ.

ಈ ಸಂಬಂಧ ಹಾಸ್ಟೆಲ್ ವಾರ್ಡನ್ ಸಂಗಮೇಶ್ ಎಂ. ಮಠ ಅವರು ಬಂದರು ಠಾಣೆಗೆ ದೂರು ನೀಡಿದ್ದಾರೆ.

ಸೆ.21ರಂದು ಬೆಳಗ್ಗೆ 8 ಗಂಟೆಗೆ ವಿದ್ಯಾರ್ಥಿ ನಿಲಯದಲ್ಲಿದ್ದ ವಿದ್ಯಾರ್ಥಿಗಳ ಪೈಕಿ ಒಟ್ಟು 4 ವಿದ್ಯಾರ್ಥಿಗಳ ಮೊಬೈಲ್ ಪೋನ್‌ಗಳು ನಾಪತ್ತೆಯಾಗಿರುವ ಬಗ್ಗೆ ವಿದ್ಯಾರ್ಥಿಗಳು ತಿಳಿಸಿದ್ದಾರೆ.

ವಿದ್ಯಾರ್ಥಿ ನಿಲಯದ ಒಳಗಡೆ ಸಂಪೂರ್ಣ ಹುಡುಕಾಡಿದರೂ ಪತ್ತೆಯಾಗಿಲ್ಲ. ಕಳವಾದ ಮೊಬೈಲ್ ಫೋನ್‌ಗಳ ಒಟ್ಟು ಮೌಲ್ಯ ಸುಮಾರು 30 ಸಾವಿರ ರೂ. ಎಂದು ದೂರಿನಲ್ಲಿ ಅವರು ತಿಳಿಸಿದ್ದಾರೆ .

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News