ಮಂಗಳೂರು: ಜೆಡಿಎಸ್ ನ ವಿವಿಧ ಘಟಕಗಳ 42 ಪದಾಧಿಕಾರಿಗಳು ಕಾಂಗ್ರೆಸ್ ಸೇರ್ಪಡೆ

Update: 2024-04-16 10:04 GMT

ಮಂಗಳೂರು: ಬಿಜೆಪಿ ಜೊತೆ ಜೆಡಿಎಸ್ ಮೈತ್ರಿಗೆ ವಿರೋಧ ವ್ಯಕ್ತಪಡಿಸಿದ ಜೆಡಿ ಎಸ್ ನ ವಿವಿದ ಘಟಕಗಳ 42 ಪದಾಧಿಕಾರಿಗಳು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ.

ಮಂಗಳವಾರ ದ.ಕ. ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ವಿನಯ ಕುಮಾರ್ ಸೊರಕೆ ಸಮ್ಮುಖದಲ್ಲಿ ಕಾಂಗ್ರೆಸ್ಗೆ ಸೇರ್ಪಡೆಗೊಂಡರು.

ಈ ಸಂದರ್ಭದಲ್ಲಿ ಪಕ್ಷದ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್ ಸೇರಿದಂತೆ ಉಪಸ್ಥಿತರಿದ್ದ ಇತರ ಕಾಂಗ್ರೆಸ್ ನಾಯಕರು ಪಕ್ಷದ ಬಾವುಟ ನೀಡಿ ಅವರನ್ನು ಸ್ವಾಗತಿಸಿದರು.

Tags:    

Writer - ವಾರ್ತಾಭಾರತಿ

contributor

Editor - jafar sadik

contributor

Byline - ವಾರ್ತಾಭಾರತಿ

contributor

Similar News