ಮಂಗಳೂರು: ಬಾಲಕಿಗೆ ಲೈಂಗಿಕ ದೌರ್ಜನ್ಯ ಪ್ರಕರಣ; ಆರೋಪಿ ಹೋಮ್ ನರ್ಸ್‌ಗೆ 20 ವರ್ಷ ಕಠಿಣ ಶಿಕ್ಷೆ, ದಂಡ

Update: 2023-10-06 14:53 GMT

ಮಂಗಳೂರು, ಅ.6: ಆರು ವರ್ಷದ ಬಾಲಕಿಗೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಿ ಹೋಮ್ ನರ್ಸ್‌ಗೆ ಮಂಗಳೂರಿನ ಹೆಚ್ಚುವರಿ ಸತ್ರ ನ್ಯಾಯಾಲಯ ಮತ್ತು ಎಫ್‌ಟಿ ಎಸ್‌ಸಿ-2 ನ್ಯಾಯಾಲಯವು 20 ವರ್ಷಗಳ ಕಠಿಣ ಶಿಕ್ಷೆ ವಿಧಿಸಿ ಶುಕ್ರವಾರ ತೀರ್ಪು ನೀಡಿದೆ.

ಹಾವೇರಿ ಜಿಲ್ಲೆಯ ನೆಲೋಗಲ್ ಗ್ರಾಮದ ಬೆನಕರಾಜ್ ಲಮಾಣಿ ಯಾನೆ ರಾಜ್(25) ಶಿಕ್ಷೆಗೊಳಗಾದ ಆರೋಪಿ. ಸಂತ್ರಸ್ತ ಬಾಲಕಿಯ ಅಜ್ಜ ಅಸೌಖ್ಯದಿಂದ ಸುರತ್ಕಲ್ ಪರಿಸರದ ಮನೆಯಲ್ಲಿದ್ದರು. ಅವರನ್ನು ನೋಡಿಕೊಳ್ಳಲು ಹೋಮ್ ನರ್ಸ್ ಆಗಿದ್ದ ಆರೋಪಿಯನ್ನು ನೇಮಿಸಲಾಗಿತ್ತು. 2022ರ ಜನವರಿಯಲ್ಲಿ ಒಂದು ದಿನ ಬಾಲಕಿಯ ತಾಯಿ ಔಷಧ ತರಲೆಂದು ಮನೆಯಿಂದ ಹೊರಗೆ ಹೋಗಿದ್ದಾಗ ಆರೋಪಿಯು ಬಾಲಕಿಯ ಮೇಲೆ ದೌರ್ಜನ್ಯ ಎಸಗಿದ್ದ ಎಂದು ಮಂಗಳೂರಿನ‌ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿತ್ತು. ಇನ್‌ಸ್ಪೆಕ್ಟರ್ ಎಸ್.ಎಚ್.ಭಜಂತ್ರಿ ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.

ವಿಚಾರಣೆ ನಡೆಸಿದ ನ್ಯಾಯಾಧೀಶೆ ಮಂಜುಳಾ ಇಟ್ಟಿ ಶುಕ್ರವಾರ ತೀರ್ಪು ನೀಡಿದ್ದಾರೆ. ಆರೋಪಿಯ ಅಪರಾಧ ಸಾಬೀತಾಗಿರುವ ಹಿನ್ನೆಲೆಯಲ್ಲಿ ಐಪಿಸಿ ಕಲಂ 376 ಮತ್ತು ಪೊಕ್ಸೋ ಕಲಂ 6ರ ಅಡಿ 20 ವರ್ಷ ಕಠಿಣ ಶಿಕ್ಷೆ ಮತ್ತು 25,000 ರೂ. ದಂಡ, ಐಪಿಸಿ ಕಲಂ 323ರಡಿ 6 ತಿಂಗಳ ಸಾದಾ ಸಜೆ ಮತ್ತು 1,000 ರೂ. ದಂಡ ವಿಧಿಸಿದ್ದಾರೆ. ಅಲ್ಲದೆ ನೊಂದ ಬಾಲಕಿಗೆ 2 ಲ.ರೂ. ಪರಿಹಾರ ನೀಡುವಂತೆ ಕಾನೂನು ಸೇವಾ ಪ್ರಾಧಿಕಾರಕ್ಕೆ ಆದೇಶ ನೀಡಿದ್ದಾರೆ. ಸರಕಾರದ ಪರವಾಗಿ ವಿಶೇಷ ಸರಕಾರಿ ಅಭಿಯೋಜಕ ವೆಂಕಟರಮಣ ಸ್ವಾಮಿ ಸಿ. ವಾದಿಸಿದ್ದರು.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News