ಮಂಗಳೂರು: ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಆರೋಪ; ಇಬ್ಬರ ಬಂಧನ

Update: 2023-12-08 15:26 GMT

ಮಂಗಳೂರು: ‘ಡ್ರಗ್ಸ್ ಫ್ರಿ ಮಂಗಳೂರು’ ಪ್ರಯುಕ್ತ ಮಂಗಳೂರು ಸಿಸಿಬಿ ಪೊಲೀಸರು ಮುಂದುವರಿಸಿದ ಕಾರ್ಯಾಚರಣೆಯಲ್ಲಿ ನಗರದಲ್ಲಿ ಮಾದಕ ವಸ್ತು ‘ಎಂಡಿಎಂಎ’ಯನ್ನು ಮಾರಾಟ ಮಾಡುತ್ತಿದ್ದ ಇಬ್ಬರನ್ನು ಬಂಧಿಸಿ ಅವರಿಂದ 6 ಲಕ್ಷ ರೂ. ಮೌಲ್ಯದ ಮಾದಕ ವಸ್ತುವನ್ನು ವಶಪಡಿಸಿಕೊಂಡಿರುತ್ತಾರೆ.

ಮಂಜೇಶ್ವರ ಸಮೀಪದ ಮಚ್ಚಂಪಾಡಿಯ ನವಾಝ್ (40) ಮತ್ತು ಪುದು ಗ್ರಾಮದ ಫರಂಗಿಪೇಟೆಯ ಅಝರುದ್ದೀನ್ ಯಾನೆ ಅಝರ್ (38) ಬಂಧಿತ ಆರೋಪಿಯಾಗಿದ್ದಾರೆ.

ನಗರದ ಕದ್ರಿ ಪಾರ್ಕ್ ಪರಿಸರದಲ್ಲಿ ಇಬ್ಬರು ವ್ಯಕ್ತಿಗಳು ಮಾದಕ ವಸ್ತುವನ್ನು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಪೊಲೀಸರು ದಾಳಿ ನಡೆಸಿದರು. ಆರೋಪಿಗಳಿಂದ 120 ಗ್ರಾಂ ತೂಕದ 6 ಲಕ್ಷ ರೂ. ಮೌಲ್ಯದ ಎಂಡಿಎಂಎ ಮಾದಕ ವಸ್ತು, ಮೂರು ಮೊಬೈಲ್ ಫೋನ್‌ಗಳು, ಡಿಜಿಟಲ್ ತೂಕ ಮಾಪನ, ಸ್ಕೂಟರ್ ವಶಪಡಿಸಿಕೊಳ್ಳಲಾಗಿದೆ.

ಇವುಗಳ ಒಟ್ಟು ಮೌಲ್ಯ 6,83,120 ರೂ. ಆಗಬಹುದು ಎಂದು ಅಂದಾಜಿಸಲಾಗಿದೆ.

ಆರೋಪಿಗಳ ವಿರುದ್ಧ ಸೆನ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಗಳ ವಿರುದ್ಧ ಈ ಹಿಂದೆ ಮಾದಕ ವಸ್ತು ಸೇವನೆ ಮತ್ತು ಮಾರಾಟ ಹಾಗೂ ವರದಕ್ಷಿಣೆ ಕಿರುಕುಳ, ಕಳ್ಳತನ ಪ್ರಕರಣಕ್ಕೆ ಸಂಬಂಧಪಟ್ಟಂತೆ ಐದು ಪ್ರಕರಣ ದಾಖಲಾಗಿವೆ.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News