ಮಂಗಳೂರು: ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಆರೋಪ; ಯುವಕ ಸೆರೆ

Update: 2023-07-23 16:26 GMT

ಮಂಗಳೂರು, ಜು.23: ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪದಲ್ಲಿ ಯುವಕನನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ನಗರ ಕುಲಶೇಖರದ ನಿಡ್ಡೆಲ್‌ನ ಹರ್ಷಿತ್ ಶೆಟ್ಟಿ (29) ಬಂಧಿತ ಆರೋಪಿ ಎಂದು ಪೊಲೀಸರು ತಿಳಿಸಿದ್ದಾರೆ.

ಈತನಿಂದ 25 ಗ್ರಾಂ ತೂಕದ ರೂ. 1,25,000 ರೂ. ಮೌಲ್ಯದ ಎಂಡಿಎಂಎ ಮಾದಕ ವಸ್ತು, 1 ಮೊಬೈಲ್ ಫೋನ್, 1 ಡಿಜಿಟಲ್ ತೂಕ ಮಾಪನವನ್ನು ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಸೊತ್ತುಗಳ ಒಟ್ಟು ಮೌಲ್ಯ 1,35,500 ರೂ. ಆಗಬಹುದು ಎಂದು ಅಂದಾಜಿಸಲಾಗಿದೆ.

ಬೆಂಗಳೂರಿನಿಂದ ಮಂಗಳೂರಿಗೆ ಮಾದಕ ವಸ್ತು ಎಂಡಿಎಂಎಯನ್ನು ಖರೀದಿಸಿಕೊಂಡು ನಗರದ ಪಡೀಲ್ ಪರಿಸರದಲ್ಲಿ ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಘಟಕದ ಎಸಿಪಿ ಪಿಎ ಹೆಗಡೆ ನೇತೃತ್ವದ ಸಿಸಿಬಿ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ಈ ಬಗ್ಗೆ ಕಂಕನಾಡಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಮಾದಕ ವಸ್ತು ಮಾರಾಟ ಜಾಲದಲ್ಲಿ ಇನ್ನೂ ಹಲವಾರು ಆರೋಪಿಗಳು ಭಾಗಿಯಾಗಿದ್ದು ಪತ್ತೆ ಕಾರ್ಯ ಮುಂದುವರಿದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿಯ ವಿರುದ್ಧ ಈ ಹಿಂದೆ ಉಡುಪಿ ಜಿಲ್ಲೆಯ ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ದರೋಡೆ ಮತ್ತು ಹಲ್ಲೆ ಪ್ರಕರಣ, ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ದರೋಡೆಗೆ ಯತ್ನ ಪ್ರಕರಣ, ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣ, ಮಂಗಳೂರು ಉತ್ತರ ಪೊಲೀಸ್ ಠಾಣೆಯಲ್ಲಿ ಶಸ್ತ್ರಾಸ್ತ್ರ ಕಾಯ್ದೆಯಡಿ ಪ್ರಕರಣ, ಕಾವೂರು ಪೊಲೀಸ್ ಠಾಣೆಯಲ್ಲಿ ಕೊಲೆಯತ್ನ ಪ್ರಕರಣ, ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಗಾಂಜಾ ಮಾರಾಟ ಮತ್ತು ಸೇವನೆ ಪ್ರಕರಣ, ಕಂಕನಾಡಿ ನಗರ ಠಾಣೆಯಲ್ಲಿ ಅಪಹರಣ ಮತ್ತು ಸರ ಕಳ್ಳತನ ಪ್ರಕರಣ ಹೀಗೆ 9 ಪ್ರಕರಣಗಳು ದಾಖಲಾಗಿವೆ.

ಪತ್ತೆ ಕಾರ್ಯದಲ್ಲಿ ಸಿಸಿಬಿ ಘಟಕದ ನಿರೀಕ್ಷಕ ಶ್ಯಾಮ್ ಸುಂದರ್ ಹೆಚ್‌ಎಂ, ಎಸ್ಸೈ ನರೇಂದ್ರ ಮತ್ತಿತರರು ಪಾಲ್ಗೊಂಡಿದ್ದರು.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News