ಮಂಗಳೂರು: ನ.4, 5ರಂದು ಅಖಿಲ ಭಾರತ ಕೊಂಕಣಿ ಸಮ್ಮೇಳನ

Update: 2023-11-02 13:51 GMT

ಮಂಗಳೂರು: 25ನೇ ಅಖಿಲ ಭಾರತೀಯ ಕೊಂಕಣಿ ಸಾಹಿತ್ಯ ಸಮ್ಮೇಳನ ನ.4 ಹಾಗೂ 5ರಂದು ಶಕ್ತಿನಗರದ ವಿಶ್ವ ಕೊಂಕಣಿ ಕೇಂದ್ರದಲ್ಲಿ ನಡೆಯಲಿದ್ದು, ಸಮ್ಮೇಳನದ ಅಧ್ಯಕ್ಷರಾಗಿ ಖ್ಯಾತ ಕಾದಂಬರಿಗಾರ್ತಿ ಹೇಮಾ ನಾಯ್ಕ್ ಆಯ್ಕೆಯಾಗಿದ್ದಾರೆ ಎಂದು ಸಮ್ಮೇಳನದ ಸ್ವಾಗತ ಸಮಿತಿಯ ಕಾರ್ಯಾಧ್ಯಕ್ಷ ಎಚ್.ಎಂ. ಪೆರ್ನಾಲ್ ಹೇಳಿದರು.

ಅವರು ಗುರುವಾರ ನಗರದ ಪ್ರೆಸ್‌ಕ್ಲಬ್‌ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಎರಡು ದಿನಗಳ ಕಾಲ ನಡೆಯಲಿರುವ ಪರಿಸರ ಸಂವಾದ, ಸಾಹಿತ್ಯ, ಸಾಂಸ್ಕೃತಿಕ ಕಾರ್ಯಕ್ರಮಗಳು ಸಾಗಲಿದೆ. ನ.4ರಂದು ಬೆಳಗ್ಗೆ 10ಕ್ಕೆ ಸಮ್ಮೇಳನದ ಉದ್ಘಾಟನೆ ನಡೆಯಲಿದೆ. ವಿದ್ವಾಂಸ ಉದಯನ್ ವಾಜಪೇಯಿ ಅವರು ‘ಸಾಹಿತ್ಯ ಮತ್ತು ಬದುಕು’ ಈ ಕುರಿತು ಉಪನ್ಯಾಸ ನೀಡಲಿದ್ದಾರೆ. ನ.5ರಂದು ಸಂಜೆ 3.30ಕ್ಕೆ ಸಮಾರೋಪ ಸಮಾರಂಭ ನಡೆಯಲಿದೆ. ಖ್ಯಾತ ಕನ್ನಡ ಸಾಹಿತಿ ಮಮತಾ ಜಿ. ಸಾಗರ ‘ಸಾಹಿತ್ಯ ಮತ್ತು ಸಾಮಾಜಿಕ ಜವಾಬ್ದಾರಿ’ ಈ ಕುರಿತು ಉಪನ್ಯಾಸ ನೀಡಲಿದ್ದಾರೆ ಎಂದರು.

ನ.4ರಂದು ಸಂಜೆ 5.30ಕ್ಕೆ ಖ್ಯಾತ ವಿದ್ವಾಂಸ ಡಾ.ಪುರುಷೋತ್ತಮ ಬಿಳಿಮಳೆಯವರ ಅಧ್ಯಕ್ಷತೆಯಲ್ಲಿ ಸಮಕಾಲೀನ ಬರಹಗಾರಿಕೆಗೆ ಸವಾಲುಗಳು ಎನ್ನುವ ವಿಚಾರದಲ್ಲಿ ಇಂಗ್ಲಿಷ್ ಭಾಷೆಯಲ್ಲಿ ಸಂವಾದ ನಡೆಯಲಿದ್ದು, ಉದಯನ್ ವಾಜಪೇಯಿ ಮತ್ತು ಮಮತಾ ಜಿ. ಸಾಗರ ವಿಚಾರ ಮಂಡನೆ ಮಾಡಲಿದ್ದಾರೆ. ರಾಜ್ಯದ ಸೇರಿದಂತೆ ನಾನಾ ರಾಜ್ಯಗಳ ಸುಮಾರು 600 ಮಂದಿ ಈ ಸಮ್ಮೇಳನದಲ್ಲಿ ಭಾಗವಹಿಸುವ ನಿರೀಕ್ಷೆಯಿದೆ ಎಂದರು.

ಈ ಸಂದರ್ಭ ಸಮ್ಮೇಳನ ಸ್ವಾಗತ ಸಮಿತಿ ಅಧ್ಯಕ್ಷ ಮೈಕಲ್ ಡಿ ಸೋಜ, ಉಪಾಧ್ಯಕ್ಷ ನಂದಗೋಪಾಲ ಶೆಣೈ, ಅಖಿಲ ಭಾರತೀಯ ಕೊಂಕಣಿ ಪರಿಷದ್ ಉಪಾಧ್ಯಕ್ಷ ಮೆಲ್ವಿನ್ ರೊಡ್ರಿಗಸ್, ಅಖಿಲ ಭಾರತೀಯ ಕೊಂಕಣಿ ಪರಿಷದ್ ಕಾರ್ಯಾಧ್ಯಕ್ಷ ಚೇತನ್ ಆಚಾರ್ಯ, ಸಮ್ಮೇಳನ ಸ್ವಾಗತ ಸಮಿತಿ ಕಾರ್ಯದರ್ಶಿ ಟೈಟಸ್ ನೊರೊನ್ಹಾ ಉಪಸ್ಥಿತರಿದ್ದರು.



(ಹೇಮಾ ನಾಯ್ಕ್)

 


Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News