ಮಂಗಳೂರು: ಅಪಾರ್ಟ್ ಮೆಂಟ್ ನಿಂದ ಹಾರಿ ಬಿಲ್ಡರ್ ಆತ್ಮಹತ್ಯೆ

Update: 2023-08-06 07:02 GMT

ಮಂಗಳೂರು, ಆ.6: ನಗರದ ಬೆಂದೂರ್ ವೆಲ್ ನಲ್ಲಿರುವ ಅಪಾರ್ಟ್ ಮೆಂಟ್ ವೊಂದರ ಫ್ಲ್ಯಾಟ್ ನಲ್ಲಿ ವಾಸವಿದ್ದ ಗುತ್ತಿಗೆದಾರ, ಬಿಲ್ಡರ್ ಮೋಹನ್ ಅಮೀನ್ (65) ಆತ್ಮಹತ್ಯೆಗೈದ ಘಟನೆ ಇಂದು ಬೆಳಗ್ಗೆ ನಡೆದಿದೆ.

ಅವರು ಇಂದು ಬೆಳಗ್ಗೆ 9 ಗಂಟೆ ಸುಮಾರಿಗೆ ತಾವು ವಾಸವಿದ್ದ ಅಪಾರ್ಟ್ ಮೆಂಟ್ ನ ಟೆರೇಸ್ ಮೇಲಿನಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಕುಲದೀಪ್ ಕುಮಾರ್ ಆರ್ ಜೈನ್ ತಿಳಿಸಿದ್ದಾರೆ. ಆತ್ಮಹತ್ಯೆಗೆ ಸ್ಪಷ್ಟ ಕಾರಣ ತಿಳಿದು ಬಂದಿಲ್ಲ.

ಈ ಬಗ್ಗೆ ಮಂಗಳೂರು ಪೂರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - Haneef

contributor

Byline - ವಾರ್ತಾಭಾರತಿ

contributor

Similar News