ಮಂಗಳೂರು| ಬಸ್‌ಗೆ ಕಲ್ಲು ತೂರಾಟ ಪ್ರಕರಣ: 3 ಮಂದಿ ಆರೋಪಿಗಳ ಬಂಧನ

Update: 2024-08-19 10:59 GMT

ಮಂಗಳೂರು: ಮುಖ್ಯಮಂತ್ರಿ ವಿರುದ್ಧ ಕರ್ನಾಟಕ ರಾಜ್ಯಪಾಲರು ಅಭಿಯೋಜನೆಗೆ ಅನುಮತಿ ನೀಡಿರುವುದನ್ನು ವಿರೋಧಿಸಿ ನಗರದಲ್ಲಿ ದ.ಕ. ಜಿಲ್ಲಾ ಕಾಂಗ್ರೆಸ್ ಸಮಿತಿಯ ನೇತೃತ್ವದಲ್ಲಿ ಪ್ರತಿಭಟನೆ ನಡೆಯುತ್ತಿದ್ದ ವೇಳೆ ಬಸ್‌ಗೆ ಕಲ್ಲು ತೂರಿರುವ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.

ಶಾಹುಲ್ ಹಮೀದ್, ಅನ್ವರ್ ಮತ್ತು ಕಿಶೋರ್ ಶೆಟ್ಟಿ ಬಂಧಿತ ಆರೋಪಿಗಳು. ಇನ್ನೂ ಹಲವರ ಬಂಧನಕ್ಕೆ ಪೊಲೀಸರು ಪ್ರಯತ್ನ ಮುಂದುವರಿಸಿದ್ದಾರೆ ಎಂದು ನಗರ ಪೊಲೀಸ್ ಆಯುಕ್ತ ಅನುಪಮ ಅಗ್ರವಾಲ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಮಧ್ಯಾಹ್ನ 12 ಗಂಟೆ ಸಮಯಕ್ಕೆ ಮಂಗಳೂರು ಮಹಾ ನಗರ ಪಾಲಿಕೆಯ ಮುಂಭಾಗದ ಟ್ರಾಫಿಕ್ ಸಿಗ್ನಲ್‌ನಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ಮಾಡುತ್ತಿದ್ದ ಸಂದರ್ಭ ಸಾರ್ವಜನಿಕರನ್ನು ಕರೆದುಕೊಂಡು ಹೋಗುವ ಬಸ್‌ಗೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿ ಬಸ್ಸಿನ ಮುಂಭಾಗದ ಗಾಜು ಒಡೆದು ನಷ್ಟ ಉಂಟು ಮಾಡಿರುವುದಾಗಿ ಬರ್ಕೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News